ನವದೆಹಲಿ: ಭಾರತದಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಾಗಿ ಮತಯಂತ್ರಗಳ ಮೇಲೆ ಬೇಕಾಬಿಟ್ಟಿ ಆರೋಪಗಳನ್ನು ಮಾಡುತ್ತಿರುವ ಈ ಸಂದರ್ಭದಲ್ಲಿ, ಭಾರತದಲ್ಲಿರುವ ಆಸ್ಟ್ರೇಲಿಯಾ ರಾಯಭಾರಿ ಹರಿಂದರ್ ಸಿಧು ಅವರು ಮತಯಂತ್ರದ ಕಾರ್ಯವನ್ನು ಶ್ಲಾಘಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಕೋಟ್ಯಾಂತರ ಜನರು ಮತ ಚಲಾವಣೆ ಮಾಡುವಂತೆ ಮಾಡುತ್ತಿರುವ ಚುನಾವಣಾ ಆಯೋಗ ಮತ್ತು ಅದರ ಅಧಿಕಾರಿಗಳ ಶ್ರಮವನ್ನೂ ಕೊಂಡಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಹರಿಂದರ್ ಸಿಧೂ, “ಇದು ನಿಜಕ್ಕೂ ಪ್ರೇರಣಾದಾಯಕ ಅನುಭವ. ಭಾರೀ ಪ್ರಮಾಣದಲ್ಲಿ ಜನರನ್ನು ಮತ ಹಾಕುವಂತೆ ಮಾಡುವುದು ಹೇಗೆ? ಅದಕ್ಕೆ ಉತ್ತರವೆಂದರೆ – ಸಂಘಟಿತ ಚುನಾವಣಾ ಆಯೋಗ ಮತ್ತು ಅದರ ಅಧಿಕಾರಿಗಳು. ಇದು ನಿಜಕ್ಕೂ ಉತ್ತಮ ವ್ಯವಸ್ಥೆ ಮತ್ತು ಸಂಘಟಿತವಾದುದು” ಎಂದಿದ್ದಾರೆ.
ರಾಷ್ಟ್ರೀಯ ಚುನಾವಣೆಗಳಲ್ಲಿ ಮತಯಂತ್ರಗಳ ಬಳಕೆ ಭಾರತೀಯ ಪ್ರಜಾಪ್ರಭುತ್ವ ಉನ್ನತ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.
ಆಸ್ಟ್ರೇಲಿಯಾಗಳಲ್ಲಿ ಬ್ಯಾಲೆಟ್ ಪೇಪರ್ ಅನ್ನು ಬಳಕೆ ಮಾಡಲಾಗುತ್ತಿದೆ, ಇದು ವ್ಯವಸ್ಥೆಯ ಸಮಗ್ರತೆಗೆ ಅಪಾಯವನ್ನು ತಂದೊಡ್ಡುವ ಭಯವಿದೆ. ವಿವಿಪ್ಯಾಟ್ ವ್ಯವಸ್ಥೆಯು ಪಾರದರ್ಶಕತೆಯನ್ನು ಚುನಾವಣಾ ವ್ಯವಸ್ಥೆಯಲ್ಲಿ ತರುತ್ತದೆ ಎಂದಿದ್ದಾರೆ.
“ನಾನು ನಿಜಕ್ಕೂ ಇವಿಎಂಗಳಿಂದ ಪ್ರಭಾವಿತಳಾಗಿದ್ದೇನೆ. ಇದು ಆಸ್ಟ್ರೇಲಿಯಾದಲ್ಲಿ ಇಲ್ಲ’ ಎಂದಿದ್ದಾರೆ.
ಪ್ರತಿಪಕ್ಷಗಳು ಇವಿಎಂಗಳ ಮೇಲೆ ಆರೋಪವನ್ನು ಮಾಡುತ್ತಿರುವ ಈ ಸಂದರ್ಭಗಳಲ್ಲಿ ಆಸ್ಟ್ರೇಲಿಯಾ ರಾಯಭಾರಿಯ ಹೇಳಿಕೆ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.