ಮಂಗಳೂರು: ಒಂದೇ ಸೂರಿನಡಿ ಕ್ರೀಡಾಳುಗಳಿಗೆ ಎಲ್ಲಾ ತರನಾದ ಕ್ರೀಡಾ ವ್ಯವಸ್ಥೆ ಸಿಗುವಂತೆ ಮಾಡುವ ಸಲುವಾಗಿ ಮಂಗಳೂರಿನಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಅನ್ನು ನಿರ್ಮಾಣ ಮಾಡುವ ಪ್ರಸ್ತಾವನೆ ಇದೆ ಎಂಬುದಾಗಿ ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, “ಈ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಬ್ಯಾಡ್ಮಿಂಟನ್, ಸ್ವಿಮ್ಮಿಂಗ್ ಪೂಲ್ ಸೇರಿದಂತೆ ಇತರ ಎಲ್ಲಾ ಸೌಲಭ್ಯಗಳೂ ಲಭ್ಯವಾಗಲಿದೆ. ಶೀಘ್ರದಲ್ಲೇ ಇದರ ಬ್ಲೂಪ್ರಿಂಟ್ ಅನ್ನು ಸಿದ್ಧಪಡಿಸಲಾಗುತ್ತದೆ” ಎಂದು ಕಾಮತ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಹಲವು ಈಜು ಪ್ರತಿಭೆಗಳಿವೆ, ಅವರಿಗೆ ಅನುಕೂಲವಾಗುವಂತಹ ಅತ್ಯಾಧುನಿಕ ಈಜು ಕೊಳವನ್ನು ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ನಿರ್ಮಾಣ ಮಾಡುತ್ತೇವೆ. ನಿರ್ಮಾಣ ವೆಚ್ಚವನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರ ಜಂಟಿಯಾಗಿ ಭರಿಸಲಿದೆ ಎಂದಿದ್ದಾರೆ.
ಮಂಗಳೂರಿನಲ್ಲಿ ಸ್ವಿಮ್ಮಿಂಗ್ ಪೂಲ್ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಎರಡು ಸ್ವಿಮ್ಮಿಂಗ್ ಪೂಲ್ ರಚನೆ ಮಾಡಲಾಗುವುದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.