ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಬಹಿರಂಗ ಸವಾಲನ್ನೊಡ್ಡಿದ್ದು, ಜೈ ಶ್ರೀರಾಮ್ ಎಂದು ಘೋಷಣೆ ಹಾಕುತ್ತೇನೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದಿದ್ದಾರೆ.
ಪಶ್ಚಿಮಬಂಗಾಳದ ಜೊಯನಗರದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ವೇದಿಕೆಯಲ್ಲಿ ನಿಂತು ಜನರಿಗೆ ಜೈಶ್ರೀರಾಮ್ ಎಂದು ಘೋಷಣೆ ಹಾಕುವಂತೆ ಹೇಳಿದರು. ಅವರು ಕೂಡ ಜೈಶ್ರೀರಾಮ್ ಎಂದರು.
ಜೈಶ್ರೀರಾಮ್ ಎಂದು ಘೋಷಣೆ ಕೂಗಿದ ಮೂವರನ್ನು ಪಶ್ಚಿಮಬಂಗಾಳದ ವೆಸ್ಟ್ ಮಿಡ್ನಾಪುರದಲ್ಲಿ ಬಂಧನಕ್ಕೊಳಪಡಿಸಲಾಗಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಮಮತಾ ಅವರ ಆಡಳಿತದಲ್ಲಿ ‘ಜೈಶ್ರೀರಾಮ್’ ಘೋಷಕ್ಕೆ ಅವಮಾನವಾಗುತ್ತಿದೆ ಎಂದು ಹಲವಾರು ಮಂದಿ ಕಿಡಿಕಾರಿದ್ದಾರೆ.
ಈ ಘಟನೆ ನಡೆದ ಬಳಿಕ ಹಲವಾರು ಮಂದಿ ‘ಜೈಶ್ರೀರಾಮ್’ ಎಂದು ಘೋಷಿಸಿ ಮಮತಾ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ, ಅಲ್ಲದೇ, ಜೈಶ್ರೀರಾಮ್ ಎಂದು ಘೋಷಿಸುತ್ತಲೇ ಇರುವುದಾಗಿ ಹೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.