ನೊಯ್ಡಾ: ರಸ್ತೆ ಸುರಕ್ಷತೆಯನ್ನು ಕಟ್ಟುನಿಟ್ಟುಗೊಳಿಸುವ ಸಲುವಾಗಿ ನೊಯ್ಡಾ ಮತ್ತು ಗ್ರೇಟರ್ ನೊಯ್ಡಾಗಳಲ್ಲಿ ಜಿಲ್ಲಾಡಳಿತವು ಹೆಲ್ಮೆಟ್ ಇಲ್ಲದವರಿಗೆ ಪೆಟ್ರೋಲ್ ಬಂಕ್ಗಳಲ್ಲಿ ಪೆಟ್ರೋಲ್ ನೀಡದಂತೆ ನಿಯಮವನ್ನು ಜಾರಿಗೊಳಿಸಿದೆ. ಪೆಟ್ರೋಲ್ ಬಂಕ್ ಮಾಲೀಕರೊಂದಿಗೆ ಸಭೆಯನ್ನು ನಡೆಸಿದ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಮೊದಲ ಹಂತವಾಗಿ ನೊಯ್ಡಾ ಮತ್ತು ಗ್ರೇಟರ್ ನೊಯ್ಡಾಗಳಲ್ಲಿ ಈ ನಿಯಮವನ್ನು ಜಾರಿ ತರಲಾಗುತ್ತಿದೆ. ಬಳಿಕ ಗೌತಮ್ ಬುದ್ಧ ನಗರದ ಗ್ರಾಮೀಣ ಭಾಗಗಳಿಗೂ ಇದನ್ನು ವಿಸ್ತರಣೆಗೊಳಿಸಲಾಗುತ್ತದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಬೃಜೇಶ್ ನರೇನ್ ಸಿಂಗ್ ಹೇಳಿದ್ದಾರೆ.
ಹೆಲ್ಮೆಟ್ ಇಲ್ಲದೆ ಆಗಮಿಸುವ ದ್ವಿಚಕ್ರ ವಾಹನದವರಿಗೆ ಪೆಟ್ರೋಲ್ ನೀಡುವುದಿಲ್ಲ, ಹೆಲ್ಮೆಟ್ ಹಾಕಿ ಬಂದಾಗ ಮಾತ್ರ ಪೆಟ್ರೋಲ್ ನೀಡಲಾಗುವುದು ಎಂದು ಹೇಳಬೇಕು ಎಂಬುದಾಗಿ ಪೆಟ್ರೋಲ್ ಬಂಕ್ ಮಾಲೀಕರಿಗೆ ಸೂಚನೆಯನ್ನು ನೀಡಲಾಗಿದೆ. ಈ ನಿಯಮ ಅಲ್ಲಿ ಜೂನ್ 1 ರಿಂದ ಅನುಷ್ಠಾನಕ್ಕೆ ಬರುತ್ತಿದೆ.
ಹೆಲ್ಮೆಟ್ ಧರಿಸದವರ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸುವ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಒಂದು ವೇಳೆ ಹೆಲ್ಮೆಟ್ ಧರಿಸದ ಪೆಟ್ರೋಲ್ ಬಂಕ್ಗೆ ಬಂದು ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದರೆ ಅಂತಹವರನ್ನು ಬಂಧನಕ್ಕೊಳಪಡಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.