ನವದೆಹಲಿ: ಹೆಣ್ಣು ಮಕ್ಕಳ ಸಾಮಾಜಿಕ ಸ್ಥಾನಮಾನ ಸುಧಾರಣೆಗಾಗಿ ಭಾರತದಲ್ಲಿ ಈಗಲೂ ಹೋರಾಟ ನಡೆಯುತ್ತಿದೆ. ಕೆಲ ಕುಟುಂಬಗಳಲ್ಲಿ ಹೆಣ್ಣು ಮಗು ಕುಟುಂಬದ ಕಣ್ಮಣಿಯಾಗಿದ್ದರೆ, ಕೆಲ ಕುಟುಂಬಗಳು ಹೆಣ್ಣನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿದೆ.
ಹೆಣ್ಣು ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು ಮತ್ತು ಆ ಮೂಲಕ ಅವರ ಸ್ಥಾನವನ್ನು ಉನ್ನತ ಮಟ್ಟಕ್ಕೆ ಏರಿಸಬೇಕು ಎಂಬ ಉದ್ದೇಶದಿಂದ ಹರಿಯಾಣದ ವಿಲೇಜ್ ಪಂಚಾಯತ್ ‘ಸೆಲ್ಫಿ ವಿತ್ ಡಾಟರ್’ ಎಂಬ ಅಭಿಯಾನವನ್ನು ಆರಂಭಿಸಿತ್ತು. ಈ ಅಭಿಯಾನವನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶದ ಜನತೆಗೆ ‘ಮನ್ ಕೀ ಬಾತ್ ‘ನಲ್ಲಿ ಕರೆ ನೀಡಿದ್ದಾರೆ.
ಮೋದಿ ಕರೆ ನೀಡಿದ್ದೇ ತಡ ಜನ ನಾ ಮುಂದು ತಾ ಮುಂದು ಎಂಬಂತೆ ತಮ್ಮ ಮಗಳೊಂದಿಗೆ ಸೆಲ್ಫಿ ತೆಗೆದು ಕಳುಹಿಸಿಕೊಟ್ಟಿದ್ದಾರೆ. ಸಾವಿರಾರು ಸೆಲ್ಫಿಗಳ ಮಹಾಪೂರವೇ ಮೋದಿ ಟ್ವಿಟರ್ಗೆ ಹರಿದು ಬಂದಿದೆ. ಪುಟಾಣಿ ಮಗುವಿನಿಂದ ಹಿಡಿದು ದೊಡ್ಡ ಮಗಳೊಂದಿಗೂ ತಂದೆ ತಾಯಿಯರು ಸೆಲ್ಫಿ ಕ್ಲಿಕ್ಕಿಸಿ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಮಗಳಿಗೆ ನಾವು ತುಂಬಾ ಪ್ರಾಶಸ್ತ್ಯ ನೀಡುತ್ತೇವೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ಸೆಲ್ಫಿ ಕಳುಹಿಸುವುದು ಹೇಗೆ?
ಹೆಣ್ಣು ಮಕ್ಕಳ ಪೋಷಕರು ತಮ್ಮ ಹೆಣ್ಣುಮಗುವಿನ ಜೊತೆ ಒಂದು ಸೆಲ್ಫಿ ಕ್ಲಿಕ್ ಮಾಡಿ, #SelfieWithDaughter ಎಂಬ ಹ್ಯಾಶ್ ಟ್ಯಾಗ್ ಬಳಸಿ ‘ಅದರ ಜೊತೆಗೆ ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯ ಕುರಿತು ಒಂದು ಅಡಿಬರಹ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿ, ಅಭಿಯಾನಕ್ಕೆ ಪ್ರೋತ್ಸಾಹ ನೀಡಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.