ಬೆಳಗಾವಿ: ಬೆಳಗಾವಿಯಲ್ಲಿನ ವಿಧಾನಸೌಧದಲ್ಲಿ ಮಳೆಗಾಲದ ಅಧಿವೇಶನ ಸೋಮವಾರ ಬೆಳಿಗ್ಗೆಯಿಂದ ಆರಂಭಗೊಂಡಿದೆ. ಈ ಅಧಿವೇಶನ ಹಲವು ಮಹತ್ವದ ನಿರ್ಣಯಗಳಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ.
ರೈತರ ಆತ್ಮಹತ್ಯೆ ಸೇರಿದಂತೆ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಜೆಡಿಎಸ್ ಮತ್ತು ಬಿಜೆಪಿ ರಣತಂತ್ರ ರೂಪಿಸಿವೆ, ಪ್ರತಿಪಕ್ಷಗಳನ್ನು ಎದುರಿಸಲು ಸರ್ಕಾರ ಕೂಡ ಸನ್ನದ್ಧವಾಘಿದೆ.
ಇನ್ನೊಂದೆಡೆ ಸುವರ್ಣಸೌಧದ ಮುಂಭಾಗದಲ್ಲಿ ರೈತರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಸೌಧದ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ನ್ನು ಏರ್ಪಡಿಸಲಾಗಿದೆ.
ಕಬ್ಬು ಬೆಳೆಗಾರರಿಗೆ ನೀಡಬೇಕಿದ್ದ ಬಾಕಿ ಹಣ ಹಾಗೂ ಅವರ ಸಮಸ್ಯೆಗಳ ಕುರಿತು ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಹಣಾಹಣಿ ನಡೆಯುವ ಸಾಧ್ಯತೆ ಇದೆ. ಈ ಅಧಿವೇಶನವು ೨೦ ದಿನಗಳಿಂದ ೧೨ ದಿನಗಳಿಗೆ ಇಳಿಸಲಾಗಿದ್ದು, ಜುಲೈ 10ರ ವರೆಗೆ ನಡೆಯಲಿದೆ.
ಬೆಂಗಳೂರಿನಲ್ಲಿ ಅಧಿವೇಶನ ಜುಲೈ 13ರಿಂದ 24ರ ವರೆಗೆ ನಡೆಯಲಿದೆ. ಬಿಬಿಎಂಪಿ ಚುನಾವಣೆ ನಿಮಿತ್ತ ಇದರ ಅವಧಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.