ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರ (ಪಿಓಕೆ)ಯಲ್ಲಿನ ಅನಧಿಕೃತ ಸಂಸ್ಥೆಗಳಲ್ಲಿ ಅಡ್ಮಿಷನ್ ಮಾಡಿಕೊಳ್ಳದಂತೆ ವಿದ್ಯಾರ್ಥಿಗಳಿಗೆ ಯೂನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ (ಯುಜಿಸಿ) ಎಚ್ಚರಿಕೆಯನ್ನು ನೀಡಿದೆ. ಪಿಓಕೆ ಭಾರತದ ಅವಿಭಾಜ್ಯ ಭಾಗವಾಗಿದೆ, ಆದರೀಗ ಅದನ್ನು ಪಾಕಿಸ್ಥಾನ ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದಿದೆ.
ಯುಜಿಸಿಯ ಕಾರ್ಯದರ್ಶಿ ಪ್ರಾಧ್ಯಾಪಕ ರಜನೀಶ್ ಜೈನ್ ಅವರು ಅಧಿಸೂಚನೆಯನ್ನು ಹೊರಡಿಸಿದ್ದು, “ಪಾಕಿಸ್ಥಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಭಾಗ. ಆದರೆ ಅಲ್ಲಿನ ಯೂನಿವರ್ಸಿಟಿಗಳು, ಮೆಡಿಕಲ್ ಕಾಲೇಜು, ತಾಂತ್ರಿಕ ಸಂಸ್ಥೆ ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳನ್ನು ಭಾರತ ಸರ್ಕಾರ ನಿರ್ಮಾಣ ಮಾಡಿಲ್ಲ ಮತ್ತು ಯುಜಿಸಿ, ಆಲ್ ಇಂಡಿಯಾ ಕೌನ್ಸಿಲ್ ಆಫ್ ಟೆಕ್ನಿಕಲ್ ಎಜುಕೇಶನ್, ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದಂತದ ಶಾಸನಬದ್ಧ ಆಡಳಿತ ಸಂಸ್ಥೆಗಳ ಮಾನ್ಯತೆಯೂ ಅದಕ್ಕಿಲ್ಲ” ಎಂದಿದ್ದಾರೆ.
ಹೀಗಾಗಿ ಪಾಕಿಸ್ಥಾನ ಅಕ್ರಮವಾಗಿ ವಶಪಡಿಸಿಕೊಂಡಿರುವ ಜಮ್ಮು ಕಾಶ್ಮೀರ, ಗಿಲ್ಗಿಟ್ ಬಲ್ತಿಸ್ಥಾನದ ಯಾವುದೇ ಶಿಕ್ಷಣ, ತಾಂತ್ರಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಅಡ್ಮಿಷನ್ ಪಡೆದುಕೊಳ್ಳಬಾರದು ಎಂದಿದ್ದಾರೆ.
ಯುಜಿಸಿಯ ಈ ಅಧಿಸೂಚನೆಗೆ ಜಮ್ಮು ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಮಿರ್ವಾಝ್ ಉಮರ್ ಫಾರೂಖ್ ವಿರೋಧವನ್ನು ವ್ಯಕ್ತಪಡಿಸಿದ್ದು, ಕಾಶ್ಮೀರಿಗಳಿಗೆ ಎಲ್ಲಿ ಬೇಕಾದರೂ ಶಿಕ್ಷಣವನ್ನು ಪಡೆಯುವ ಹಕ್ಕಿದೆ ಎಂದಿದ್ದಾನೆ.
ಆದರೆ ಯುಜಿಸಿಯಂತಹ ಸಂಸ್ಥೆಗಳ ಮಾನ್ಯತೆ ಇಲ್ಲದ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣವನ್ನು ಪಡೆದುಕೊಂಡರೆ ವಿದ್ಯಾರ್ಥಿಗಳ ಭವಿಷ್ಯ ಅತಂತ್ರಗೊಳ್ಳುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.