ನವದೆಹಲಿ: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೋರ್ ಅವರು ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ಬಗ್ಗೆ ನೀಡಿರುವ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೀವ್ರವಾಗಿ ಖಂಡಿಸಿದ್ದಾರೆ. ಈ ಹೇಳಿಕೆಗಾಗಿ ಆಕೆಯನ್ನು ಕ್ಷಮಿಸುವುದಿಲ್ಲ ಎಂದಿದ್ದಾರೆ.
ನ್ಯೂಸ್ 24ಗೆ ಸಂದರ್ಶನ ನೀಡಿ ಮಾತನಾಡಿದ ಅವರು, ಪ್ರಗ್ಯಾ ಅವರು ನೀಡಿದ ಹೇಳಿಕೆ ಗಾಂಧೀಜಿಗೆ ಮಾಡಿದ ಅವಮಾನ ಎಂದಿದ್ದಾರೆ.
“ಆಕೆ ಕ್ಷಮೆಯಾಚನೆ ಮಾಡಿದ್ದಾರೆ, ಅದು ಬೇರೆ ವಿಷಯ. ಆದರೆ ನಾನು ಆಕೆಯನ್ನು ಕ್ಷಮಿಸುವುದಿಲ್ಲ” ಎಂದಿದ್ದಾರೆ.
ಗೋಡ್ಸೆಗೆ ಸಂಬಂಧಿಸಿದಂತೆ ದೇಶದಲ್ಲಿ ನಡೆಯುತ್ತಿರುವ ಚರ್ಚೆಯ ಬಗ್ಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ಇಂತಹ ವಿಷಯಗಳನ್ನು ಮಾತನಾಡುವಾಗ ಜನರು 100 ಬಾರಿ ಯೋಚನೆ ಮಾಡಬೇಕು ಎಂದಿದ್ದಾರೆ.
PM @narendramodi ji on Godse remark’. pic.twitter.com/L0nmadq4N4
— Chowkidar Kuljeet Singh Chahal (@kuljeetschahal) May 17, 2019
ಇತ್ತೀಚಿಗೆ ನಟ ಕಮಲ್ ಹಾಸನ್ ಅವರು, ನಾಥುರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಾಧ್ವಿ ಗೋಡ್ಸೆ ದೇಶಭಕ್ತ ಎಂದಿದ್ದರು. ಇದು ಭಾರೀ ಚರ್ಚೆಯನ್ನು ಹುಟ್ಟು ಹಾಕಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.