ಬೈಂದೂರು: ವಿಶ್ವವಿದ್ಯಾನಿಲಯ ನಿಗದಿಪಡಿಸಿದ ಪಠ್ಯದೊಂದಿಗೆ ನೈತಿಕ, ಮೌಲ್ಯಯುಕ್ತ ಶಿಸ್ತುಬದ್ಧ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವ ಅಗತ್ಯವಿದೆ ಎಂದು ಬೈಂದೂರು ವಿಧಾನಸಭಾ ಸದಸ್ಯ ಕೆ ಗೋಪಾಲ ಪೂಜಾರಿ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ, ಅವರು ತಮ್ಮ ಅಧ್ಯಕ್ಷೀಯ ಮಾತುಗಳನ್ನಾಡಿದರು. ಕುಂದಾಪುರ ತಾಪಂ ಸದಸ್ಯ ಎಸ್. ರಾಜು ಪೂಜಾರಿ ಮಾತನಾಡಿ, ಮುಂದಿನ ದಿನಗಳಲ್ಲಿ ಕಲೆ, ವಾಣಿಜ್ಯದೊಂದಿಗೆ ವಿಜ್ಞಾನ ವಿಷಯದಲ್ಲೂ ಪದವಿಯನ್ನು ಪಡೆಯುವ ಅವಕಾಶ ಬೈಂದೂರಿನ ವಿದ್ಯಾರ್ಥಿಗಳಿಗೆ ಸಿಗಲಿದೆ ಎಂದರು.
ಇನ್ನೊರ್ವ ತಾಪಂ ಸದಸ್ಯ ಕೆ ರಾಮ ಶೇರುಗಾರ್ ಮಾತನಾಡಿ, ವಿದ್ಯಾರ್ಥಿದಿಸೆಯಲ್ಲಿ ಕಷ್ಟಪಟ್ಟು ಕಲಿತರೆ ಮುಂದಿನ ಜೀವನ ಸುಖಮಯವಾಗುತ್ತದೆ ಎಂದು ತಮ್ಮದೇ ಜೀವನದ ನಿದರ್ಶನದ ನೀಡಿ ವಿವರಿಸಿದರು. ಬೈಂದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ಧನ ಯು ಮಾತನಾಡಿ, ನಮ್ಮ ಗ್ರಾಮದ ಈ ಕಾಲೇಜಿಗೆ ನ್ಯಾಕ್ ಮಾನ್ಯತೆ ಅಗತ್ಯವಿದ್ದು, ಅದನ್ನು ಪಡೆಯಲು ನಾವು ಒಟ್ಟಾಗಿ ಶ್ರಮಿಸುವ ಅಗತ್ಯವಿದೆ ಎಂದರು. ಪ್ರಾಂಶುಪಾಲ ಪ್ರೊ. ಬಿ.ಎ.ಮೇಳಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕನ್ನಡ ಉಪನ್ಯಾಸಕ ಸತೀಶ ಎಂ ಸ್ವಾಗತಿಸಿದರು. ರಘು ನಾಯ್ಕ ವಂದಿಸಿದರು. ಸಾಂಸ್ಕೃತಿಕ ಸಂಘದ ಸಂಚಾಲಕ ಪಾಂಡುರಂಗ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.