ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
130 ಬೆಟಾಲಿಯನ್ CRPF, 55 ರಾಷ್ಟ್ರೀಯ ರೈಫಲ್ಸ್ (ಆರ್ಆರ್) ಮತ್ತು ಸ್ಪೆಷಲ್ ಆಪರೇಶನ್ ಗ್ರೂಪ್ (ಎಸ್ಒಜಿ) ಜಂಟಿಯಾಗಿ ಪುಲ್ವಾಮದ ಅವಂತಿಪೋರಾದ ಪಂಝಗಮ್ ಗ್ರಾಮದಲ್ಲಿ ಕಾರ್ಯಾಚರಣೆಯನ್ನು ನಡೆಸಿವೆ. ಈ ವೇಳೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ಏರ್ಪಟ್ಟಿದ್ದು, ಇಬ್ಬರು ಭಯೋತ್ಪಾದಕರು ನೆಲಕ್ಕುರುಳಿದ್ದಾರೆ.
ಮೂಲಗಳ ಪ್ರಕಾರ, ಮೃತ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ. ಓರ್ವ ಉಗ್ರ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಶೌಕತ್ ಅಹ್ಮದ್ ದಾರ್ ಎಂದು ಹೇಳಲಾಗಿದೆ. ಈತ ಯೋಧ ಔರಂಗಜೇಬ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ. ಈತ ಪಂಝಗಮ್ ನಿವಾಸಿಯಾಗಿದ್ದಾನೆ. ಇನ್ನೊಬ್ಬ ಉಗ್ರನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಮೃತ ದೇಹಗಳನ್ನು ಮತ್ತು ಎಕೆ-56 ರೈಫಲ್ಸ್ಗಳನ್ನು ಸ್ಥಳದಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಉಗ್ರರು ಅವಿತುಕೊಂಡಿದ್ದ ಮನೆಯನ್ನು ಸ್ಪೋಟ ಮಾಡಲಾಗಿದೆ.
ಇನ್ನೊಂದೆಡೆ ಅನಂತ್ ನಾಗ್ ಜಿಲ್ಲೆಯ ಡೆಹ್ರೂನಾ ಗ್ರಾಮದಲ್ಲಿ ಪ್ರತ್ಯೇಕ ಎನ್ಕೌಂಟರ್ ಏರ್ಪಟ್ಟಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.