ನವದೆಹಲಿ: ಇತ್ತೀಚಿಗೆ ಪ್ರಕರಣವೊಂದರ ವಿಚಾರಣೆಯನ್ನು ನಡೆಸುತ್ತಿದ್ದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮವನ್ನು ಜರುಗಿಸುವಂತೆ ಎರಡೂ ರಾಜ್ಯಗಳಿಗೆ ಕಿವಿಮಾತು ಹೇಳಿದೆ. ಮಾತ್ರವಲ್ಲದೇ, ಕಾನೂನು ಮತ್ತು ಸುವ್ಯವಸ್ಥೆಯನ್ನು ಹೇಗೆ ಕಾಪಾಡಬೇಕು ಎಂಬುದಕ್ಕೆ ಉತ್ತರಪ್ರದೇಶದ ಉದಾಹರಣೆಯನ್ನು ನೀಡಿದೆ.
ಸ್ಥಳಿಯ ನ್ಯಾಯಾಲಯದ ತೀರ್ಪಿನ ಬಗ್ಗೆ ಮೇಲ್ಮನವಿ ಬಂದಿದ್ದನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೀವ್ ಶರ್ಮಾ ಮತ್ತು ನ್ಯಾ.ಹರಿಂದರ್ ಸಿಂಗ್ ಸಿಧು ಅವರು, ಹರಿಯಾಣ ಮತ್ತು ಪಂಜಾಚ್ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿಸಲ್ಲಿ ಸರಿಯಾದ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶದ ಮಾದರಿಯನ್ನು ತೆಗೆದುಕೊಂಡು ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಲು ಕಠಿಣ ನಿಯಮ ಅಳವಡಿಸಿ ಎಂದು ಕಿವಿಮಾತು ಹೇಳಿದ್ದಾರೆ.
ಯೋಗಿ ಆದಿತ್ಯನಾಥ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ, ಆ ರಾಜ್ಯದ ಕಾನೂನು ವ್ಯವಸ್ಥೆ ಮಹತ್ತರವಾದ ಬದಲಾವಣೆಯನ್ನು ಕಂಡಿದೆ. 2017 ರಿಂದ ಅಲ್ಲಿ 3000 ಎನ್ಕೌಂಟರ್ಗಳನ್ನು ಮಾಡಲಾಗಿದೆ. ಇದರಲ್ಲಿ 838 ಅಪರಾಧಿಗಳು ಗಾಯಗೊಂಡಿದ್ದಾರೆ, 12000 ಅಪರಾಧಿಗಳು ಹೊರ ಬರಲು ಭಯಗೊಂಡು ತಮ್ಮ ಜಾಮೀನನ್ನು ನಿರಾಕರಿಸಿದ್ದಾರೆ.
ಸುಮಾರು 9 ಅಪರಾಧಿಗಳನ್ನು ಹತ್ಯೆ ಮಾಡಲಾಗಿದೆ. 135 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಇದೆಲ್ಲಾ ಸಾಧ್ಯವಾಗಿದ್ದು ಯೋಗಿ ಸರ್ಕಾರ ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ ಹಿನ್ನಲೆಯಲ್ಲಿ. ಈಗ ಅಲ್ಲಿ ಕೊಲೆ, ಸುಲಿಗೆ, ದರೋಡೆಗಳ ಸಂಖ್ಯೆ ಗಣನೀಯವಾಗಿ ತಗ್ಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.