ಶ್ರೀನಗರ: ನಿನ್ನೆ ಕೊಂಚ ಮಟ್ಟಿಗೆ ತಗ್ಗಿದ್ದ ಜಮ್ಮು ಕಾಶ್ಮೀರದಲ್ಲಿನ ಪ್ರವಾಹ ಇದೀಗ ಮತ್ತೆ ಆರ್ಭಟಿಸಲು ಆರಂಭಿಸಿದೆ. ವಿಪರೀತವಾಗಿ ಸುರಿಯುತ್ತಿರುವ ಮಳೆ ಅಲ್ಲಿನ ಜನರನ್ನು ಆತಂಕಕ್ಕೆ ದೂಡಿದೆ. ಅಲ್ಲದೇ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
ಎ.1ರಿಂದ 3ರವರೆಗೆ ಅತಿಹೆಚ್ಚು ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಎರಡು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳು ಈಗಾಗಲೇ ಕಣಿವೆ ರಾಜ್ಯದಲ್ಲಿದ್ದು, ಇನ್ನೂ ಆರು ತಂಡಗಳನ್ನು ಹೆಚ್ಚುವರಿಯಾಗಿ ಅಲ್ಲಿಗೆ ಕಳುಹಿಸಲು ನಿರ್ಧರಿಸಲಾಗಿದೆ. ನಿನ್ನೆ ತೆರೆಯಲಾಗಿದ್ದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ ಮತ್ತೆ ಇಂದು ಮುಚ್ಚಲಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಇದನ್ನು ತೆರೆಯದಿರಲು ನಿರ್ಧರಿಸಲಾಗಿದೆ.
ಭೂಕುಸಿ ಉಂಟಾಗುವ ಸ್ಥಳದಿಂದ ಸುರಕ್ಷಿತ ಪ್ರದೇಶದಕ್ಕೆ ಪಾಲಾಯನ ಮಾಡುವಂತೆ ಜನರಿಗೆ ಕರೆ ನೀಡಿಲಾಗಿದೆ. ವಿಪರೀತ ಸುರಿಯುತ್ತಿರುವ ಮಳೆ, ಕರಗುತ್ತಿರುವ ಮಂಜುಗಡ್ಡೆಗಳು ಕಣಿವೆರಾಜ್ಯದ ಜನರನ್ನು ಚಳಿಯಲ್ಲಿ ನಡುಗುವಂತೆ ಮಾಡಿದೆ.
ರಕ್ಷಣಾ ಪಡೆಗಳು ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಈಗಾಗಲೇ ಸಾವಿರಾರು ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ಪರಿಹಾರ ಕಾರ್ಯಗಳೂ ಭರದಿಂದ ಸಾಗಿದೆ. ಎ.3ರಿಂದ ಪರಿಸ್ಥಿತಿ ಸುಧಾರಿಸಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.