ನವದೆಹಲಿ: ಈ ವರ್ಷ ಇದುವರೆಗೆ ಸುಮಾರು 86 ಉಗ್ರರನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಸಫಲವಾಗಿವೆ ಎಂದು ನಾರ್ದನ್ ಕಮಾಂಡ್ ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ರಣ್ಬೀರ್ ಸಿಂಗ್ ಅವರು ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಆಯ್ದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು.
ಪ್ರಸ್ತುತ ನಡೆಯುತ್ತಿರುವ ಮಾದರಿಯಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಮುಂದುವರೆಯಲಿದೆ ಎಂದ ಅವರು, ಯುವಕರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಸೇನೆ ಯಶಸ್ವಿಯಾಗುತ್ತಿದೆ ಎಂದಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಪ್ರಸ್ತುತ ಭದ್ರತಾ ಸ್ಥಿತಿಗತಿಗಳು ಸಂಪೂರ್ಣ ನಿಯಂತ್ರಣದಲ್ಲಿವೆ, ಚೀನಾದೊಂದಿಗಿನ ಗಡಿಯಲ್ಲೂ ಶಾಂತಿ ನೆಲೆಸಿದೆ. ಯಾವುದೇ ಬಿಕ್ಕಟ್ಟು ಉದ್ಭವಿಸದ ರೀತಿಯಲ್ಲಿ ಎರಡೂ ಪಡೆಗಳ ನಡುವೆ ವಿಶ್ವಾಸ ನಿರ್ಮಾಣದ ಕೆಲಸ ನಡೆಯುತ್ತಿದೆ ಎಂದಿದ್ದಾರೆ.
GOC-in-Chief Northern Command, Lt Gen Ranbir Singh: During this year we have been able to neutralize 86 terrorists so far & our operations continue in the same manner. Nearly 20 of them have been apprehended, we’ve also been able to bring back many of them to the mainstream. pic.twitter.com/hFAEB1J52E
— ANI (@ANI) May 20, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.