ನವದೆಹಲಿ: ಎರಡನೇ ಅವಧಿಗೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಆಡಳಿತಕ್ಕೆ ಬರುತ್ತಿರುವುದಕ್ಕೆ ಅಭಿನಂದನೆಗಳನ್ನು ತಿಳಿಸಿರುವ ವಿಶ್ವ ನಾಯಕರುಗಳಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಸರಣಿ ಟ್ವೀಟ್ಗಳನ್ನು ಮಾಡಿರುವ ಮೋದಿಯವರು, ಅಫ್ಘಾನಿಸ್ಥಾನ ಅಧ್ಯಕ್ಷ ಅಶ್ರಫ್ ಘನಿ, ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಮುಂತಾದ ನಾಯಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಅಭಿನಂದನೆಗೆ ಟ್ವಿಟ್ ಮಾಡಿರುವ ಅವರು, “ಧನ್ಯವಾದಗಳು ಡೊನಾಲ್ಡ್ ಟ್ರಂಪ್, ಈ ವಿಜಯ 130 ಕೋಟಿ ಭಾರತೀಯರ ಆಶೋತ್ತರಗಳನ್ನು ಪ್ರತಿಬಿಂಬಿಸುತ್ತದೆ ಆತ್ಮೀಯ ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ವೃದ್ಧಿಸಿಕೊಳ್ಳುವ ಸಲುವಾಗಿ ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುವುದಕ್ಕೆ ಮುಂದೆ ನೋಡುತ್ತಿದ್ದೇನೆ. ಈ ಬಾಂಧವ್ಯ ಜಾಗತಿಕ ಶಾಂತಿ ಮತ್ತು ಸಮೃದ್ಧಿಗಾಗಿ ಅತ್ಯಂತ ಅವಶ್ಯಕ ಎಂದಿದ್ದಾರೆ.
Thank you @realDonaldTrump!
This victory represents the aspirations of a nation of 1.3 billion people.
I too am looking forward to working closely with you for closer bilateral ties, which also augur well for global peace and prosperity. https://t.co/MbnDQBBnMF
— Narendra Modi (@narendramodi) May 23, 2019
ಅಭಿನಂದನೆಗಳನ್ನು ತಿಳಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ನಟ ಅಕ್ಷಯ್ ಕುಮಾರ್, ನಟ ರಜನಿಕಾಂತ್ ಮತ್ತು ಗಾಯಕಿ ಆಶಾ ಭೋಸ್ಲೆ, ಲತಾ ಮಂಗೇಶ್ಕರ್, ಅನೇಕ ಉದ್ಯಮಿಗಳು, ಚಿತ್ರರಂಗದ ತಾರೆಯರು, ಕ್ರೀಡಾಪಟುಗಳು, ರಾಜಕೀಯ ಕ್ಷೇತ್ರದ ಗಣ್ಯರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.