ನವದೆಹಲಿ : 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿದೆ. ಅದರ ಬರೋಬ್ಬರಿ 7 ಮಾಜಿ ಮುಖ್ಯಮಂತ್ರಿಗಳು ಸೋಲನ್ನು ಅನುಭವಿಸಿದ್ದಾರೆ.
ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ದೆಹಲಿ ಈಶಾನ್ಯ ಭಾಗದ ಲೋಕಸಭಾ ಕ್ಷೇತ್ರದಿಂದ ಪರಾಭವಗೊಂಡಿದ್ದಾರೆ. ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ನೈನಿತಾಲ್ ಉದಂಸಿಂಗ್ ನಗರದಲ್ಲಿ ಪರಾಭವಗೊಂಡಿದ್ದಾರೆ. ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪೇಂದ್ರ ಸಿಂಗ್ ಹೂಡಾ ಅವರು ಸೋನಿಪತ್ನಲ್ಲಿ ಪರಾಭವಗೊಂಡಿದ್ದಾರೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರು ಸೋಲಾಪುರ್ನಲ್ಲಿ ಸೋಲು ಅನುಭವಿಸಿದ್ದಾರೆ. ಮೇಘಾಲಯದ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಅವರು ತುರಾದಲ್ಲಿ, ಮಾಜಿ ವೀರಪ್ಪ ಮೊಯಿಲಿಯವರು ಚಿಕ್ಕಬಳ್ಳಾಪುರದಲ್ಲಿ ಪರಾಭವಗೊಂಡಿದ್ದಾರೆ.
ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಾಂ ತುಕಿ ಅವರು ಕೇಂದ್ರ ಸಚಿವ ಕಿರಣ್ ಅವರ ವಿರುದ್ಧ ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ಮಹಾರಾಷ್ಟ್ರದ ಮತ್ತೋರ್ವ ಮುಖ್ಯ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಅವರು ಕೂಡ ಪರಾಭವಗೊಂಡಿದ್ದಾರೆ.
ಸುಶೀಲ್ ಕುಮಾರ್ ಶಿಂದೆ ಅವರು ಸತತ ಎರಡನೇ ಬಾರಿಗೆ ಸೋಲನ್ನು ಕಾಣುತ್ತಿದ್ದಾರೆ. ವೀರಪ್ಪ ಮೊಯಿಲಿ ಮತ್ತು ಚೌಹಾನ್ ಹಾಲಿ ಲೋಕಸಭಾ ಸದಸ್ಯರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.