ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ವೃತ್ತಿಪರ ಪರೀಕ್ಷಾ ಮಂಡಳಿ ಹಗರಣ ಅಥವಾ ವ್ಯಾಪಮ್ ಹಗರಣಕ್ಕೆ ಸಂಬಂಧಿಸಿದ ಮತ್ತಿಬ್ಬರು ಆರೋಪಿಗಳು ಭಾನುವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.
ಈ ಹೈ ಪ್ರೊಫೈಲ್ ಹಗರಣದಲ್ಲಿ ಆರೋಪಿಗಳಾಗಿದ್ದ ಮತ್ತು ಸಾಕ್ಷಿಗಳಾಗಿದ್ದ ಸುಮಾರು ೪೦ ಮಂದಿ ಇದುವರೆಗೆ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ, ಇತ್ತೀಚಿಗಷ್ಟೇ ಮಾಜಿ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರ ಪುತ್ರ ಶೈಲೇಶ್ ಯಾದವ್ ಅವರು ತಮ್ಮ ನಿವಾಸದ ಕೋಣೆಯಲ್ಲಿ ಸತ್ತು ಬಿದ್ದಿದ್ದರು.
ಈ ರೀತಿ ಹಗರಣದ ಆರೋಪಿಗಳು, ಸಾಕ್ಷಿಗಳು ಸಾಯುತ್ತಿದ್ದರೂ ಅಲ್ಲಿನ ಸರ್ಕಾರ ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಈ ಸಾವುಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂಬ ಕೂಗು ಕೇಳಿ ಬರುತ್ತಿದ್ದರೂ ಮಧ್ಯಪ್ರದೇಶ ಗೃಹಸಚಿವ ಬಾಬು ಲಾಲ್ ಗೌರ್ ಇದು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
‘ವ್ಯಾಪಮ್ ಹಗರಣಕ್ಕೂ ಈ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ, ಯಾರು ಬರುತ್ತಾರೋ ಅವರು ಹೋಗಲೇ ಬೇಕು, ಜೈಲಿನಲ್ಲಿ ಅನಾರೋಗ್ಯದ ಕಾರಣ ಕೈದಿಗಳು ನಿತ್ಯ ಸಾಯುತ್ತಾರೆ. ಈ ಬಗ್ಗೆ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ’ ಎಂದು ಅವರು ಸಮರ್ಥನೆ ನೀಡಿದ್ದಾರೆ.
ಮಾಜಿ ಶಿಕ್ಷಣ ಸಚಿವ ಲಕ್ಷ್ಮೀಕಾಂತ್ ಶರ್ಮಾ ಸೇರಿದಂತೆ ಅನೇಕ ಪ್ರಭಾವಿಗಳು ಪ್ರಕರಣದಲ್ಲಿ ಬಂಧಿತರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.