ನವದೆಹಲಿ: ಸ್ವಿಸ್ ಬ್ಯಾಂಕಿನಲ್ಲಿ ಖಾತೆ ಹೊಂದಿರುವವರ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಪ್ರಕ್ರಿಯೆಯನ್ನು ಸ್ವಿಜ್ಜರ್ಲ್ಯಾಂಡ್ ಆರಂಭಿಸಿದೆ. ಭಾರತ ಸರ್ಕಾರಕ್ಕೆ ಮಾಹಿತಿಯನ್ನು ಹಂಚಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಖಾತೆ ಹೊಂದಿರುವ 11 ಮಂದಿ ಭಾರತೀಯರಿಗೆ ನೋಟಿಸ್ ಜಾರಿಗೊಳಿಸಿದೆ.
ಮೇ.21ರಿಂದ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಭಾರತದೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳುವಂತೆ ಕೊನೆಯ ಒಂದು ಅವಕಾಶವನ್ನು ನೀಡುವ ಸಲುವಾಗಿ ನೋಟಿಸ್ ನೀಡಲಾಗಿದೆ. ಸ್ವಿಟ್ಜರ್ಲ್ಯಾಂಡಿನ ಫೆಡರಲ್ ಟ್ಯಾಕ್ಸ್ ಅಡ್ಮಿನಿಸ್ಟ್ರೇಶನ್, ಸ್ವಿಸ್ ಸರ್ಕಾರದ ನೋಡಲ್ ಡಿಪಾರ್ಟ್ ಮೆಂಟ್ ಈ ನೋಟಿಸ್ ಜಾರಿಗೊಳಿಸಿದೆ.
ಮೇ.21ರಿಂದ ಒಟ್ಟು 11 ಮಂದಿ ಭಾರತೀಯರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಇದರಲ್ಲಿ ಕೃಷ್ಣ ಭಗವಾನ್ ರಾಮಚಂದ್, ಕಲ್ಪೇಶ್ ಹರ್ಷದ್ ಕಿನರಿವಾಲಾ ಅವರ ಹೆಸರು ಇದೆ. ಉಳಿದವರ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.
ನರೇಂದ್ರ ಮೋದಿ ಸರ್ಕಾರ 2014ರಲ್ಲಿ ಆಡಳಿತಕ್ಕೆ ಬಂದ ಬಳಿಕ ಸ್ವಿಸ್ ಬ್ಯಾಂಕಿನಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣವನ್ನು ವಾಪಾಸ್ ತರುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನವನ್ನು ನಡೆಸಲಾಗಿತ್ತು. ಈ ಬಗ್ಗೆ ಸ್ವಿಟ್ಜರ್ಲ್ಯಾಂಡ್ ಸರ್ಕಾರಕ್ಕೂ ಮನವಿಯನ್ನು ಮಾಡಿಕೊಳ್ಳಲಾಗಿತ್ತು. ಇದೀಗ ಮೋದಿ ಸರ್ಕಾರ ಎರಡನೇಯ ಅವಧಿಗೆ ಅಧಿಕಾರಕ್ಕೇರುವ ಅವಧಿಯಲ್ಲಿ ಸ್ವಿಸ್ ಬ್ಯಾಂಕಿನಲ್ಲಿ ಖಾತೆ ಹೊಂದಿರುವ ಭಾರತೀಯರ ಮಾಹಿತಿ ಹಂಚಿಕೆಯ ಪ್ರಕ್ರಿಯೆಯನ್ನು ತತ್ವರಿತಗೊಳಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.