ನವದೆಹಲಿ: ನೂತನ ಎನ್ಡಿಎ ಸರ್ಕಾರದಡಿಯಲ್ಲಿ 100 ದಿನಗಳೊಳಗೆ 1,000 ಕಿಮೀ ರಾಷ್ಟ್ರೀಯ ಹೆದ್ದಾರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಯೋಜನೆಯನ್ನು ರೂಪಿಸಿದೆ ಎಂದು ಬೆಳವಣಿಗೆಯ ಬಗ್ಗೆ ಮಾಹಿತಿ ಇರುವ ಅಧಿಕಾರಿಗಳು ತಿಳಿಸಿದ್ದಾರೆ.
ಎನ್ಡಿಎ ಸರ್ಕಾರ ತನ್ನ ಸಂಪುಟ ಸಚಿವರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಇರುವಂತೆ ಪ್ರಧಾನಿ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗುವಂತೆ ಸೂಚಿಸಿದೆ ಎನ್ನಲಾಗಿದೆ.
ಸಾರಿಗೆ ಸಚಿವಾಲಯದ ಕಾರ್ಯದರ್ಶಿ ಸಂಜೀವ್ ರಂಜನ್ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಯೋಜನೆಗೆ ಸಂಬಂಧಿಸಿದ ಪ್ರೆಸಂಟೇಶನ್ ಅನ್ನು ನೀಡಲಾಗಿದೆ. ರೂ. 86,660 ಕೋಟಿ ವೆಚ್ಚದಲ್ಲಿ 2019-20ರ ಹಣಕಾಸು ವರ್ಷದಲ್ಲಿ 6,020 ಕಿಮೀ ರಸ್ತೆಯನ್ನು ನಿರ್ಮಾಣ ಮಾಡಲು ಸಚಿವಾಲಯ ನಿರ್ಧರಿಸಿದೆ ಎನ್ನಲಾಗಿದೆ.
“100 ದಿನಗಳ ಅಜೆಂಡಾಗಾಗಿ ಹಲವು ಸಭೆಗಳನ್ನು ನಡೆಸುತ್ತಿದ್ದೇವೆ, ಮುಂಬರುವ ದಿನಗಳಲ್ಲೂ ಸಭೆ ಮುಂದುವರೆಯಲಿದೆ. ನೂತನವಾಗಿ ಆಯ್ಕೆಯಾಗುವ ಸಂಸದರು ಹೊಸ ಯೋಜನೆಗೆ ಅನುಮೋದೆನೆಯನ್ನು ನೀಡಲಿದ್ದಾರೆ” ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 2019ರ ಪ್ರಣಾಳಿಕೆಯಲ್ಲಿ ಬಿಜೆಪಿಯು, ರಾಷ್ಟ್ರೀಯ ಹೆದ್ದಾರಿಯ ಉದ್ದವನ್ನು 1,32,500 ಕಿಮೀಯಿಂದ 2,00,000 ಕಿಮೀಗೆ ಕೊಂಡೊಯ್ಯುವ ಭರವಸೆಯನ್ನು ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.