ನವದೆಹಲಿ: ನೂತನ ಸಂಪುಟ ಸಚಿವರನ್ನು ನೇಮಕಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಮೂಲಗಳ ಪ್ರಕಾರ, ಸುಮಾರು 5 ಗಂಟೆಗಳವರೆಗೆ ಸಭೆ ಮುಂದುವರೆದಿದೆ. ಶಾ ಅವರು ಕೂಟ ಸಂಪುಟವನ್ನು ಸೇರಬಹುದು ಎಂಬ ವದಂತಿ ಹಬ್ಬಿದೆ, ಆದರೆ ಇದನ್ನು ಬಿಜೆಪಿ ಮೂಲಗಳು ತಳ್ಳಿ ಹಾಕಿವೆ.
ಗುರುವಾರ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು 65 ಸಂಪುಟ ಸಚಿವರು ಪ್ರಮಾಣವಚನವನ್ನು ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ. ಯುವಕರು ಮತ್ತು ಅನುಭವವುಳ್ಳವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇದೆ. ಖಾತೆ ಹಂಚಿಕೆ ವಿಷಯದಲ್ಲೂ ಮೋದಿ ಮತ್ತು ಶಾ ಶೀಘ್ರದಲ್ಲೇ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಹಣಕಾಸು, ರಕ್ಷಣೆ, ವಿದೇಶಾಂಗ ವ್ಯವಹಾರಗಳಂತಹ ಕೆಲವು ಖಾತೆಗಳು ಕೆಲವೊಂದು ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅರುಣ್ ಜೇಟ್ಲಿ ವಿತ್ತ ಖಾತೆಯಿಂದ ದೂರ ಉಳಿಯುವ ಸಾಧ್ಯತೆ ಇದೆ. ಆದರೆ ಪ್ರಧಾನಿಯವರು ಸುಷ್ಮಾ ಸ್ವರಾಜ್, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿಯವರನ್ನು ಪ್ರಮುಖ ಖಾತೆಯಲ್ಲೇ ಮುಂದುವರೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅತ್ಯುತ್ತಮ ಪ್ರದರ್ಶನ ನೀಡಿರುವ ಪಶ್ಚಿಮಬಂಗಾಳ, ಒರಿಸ್ಸಾ ಮತ್ತು ಈಶಾನ್ಯ ರಾಜ್ಯಗಳಿಗೆ ಸಂಪುಟದಲ್ಲಿ ಉತ್ತಮ ಪ್ರತಿನಿಧಿತ್ವ ಸಿಗುವ ನಿರೀಕ್ಷೆ ಇದೆ.
ಗುರುವಾರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. BIMSTEC ರಾಷ್ಟ್ರಗಳ ನಾಯಕರುಗಳು ಇದರಲ್ಲಿ ಭಾಗಿಯಾಗಲಿದ್ದಾರೆ. ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಮುಂತಾದವರು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.