ನವದೆಹಲಿ: ರಾಜಕೀಯ ದ್ವೇಷದಲ್ಲಿ ಹತರಾದ ಪಶ್ಚಿಮಬಂಗಾಳದ 50 ಬಿಜೆಪಿ ಕಾರ್ಯಕರ್ತರ ಕುಟುಂಬದವರಿಗೆ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲು ಆಹ್ವಾನವನ್ನು ನೀಡಲಾಗಿದೆ.
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ, ಕಳೆದ 6 ವರ್ಷಗಳಿಂದ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಹಲವಾರು ಮಂದಿ ಬಿಜೆಪಿ ಕಾರ್ಯಕರ್ತರನ್ನು ಟಿಎಂಸಿ ಗೂಂಡಾಗಳು, ಎಡಪಂಥೀಯರು ಹತ್ಯೆ ಮಾಡಿದ್ದಾರೆ. ಇವರ ಕುಟುಂಬದವರಿಗೆ ಗೌರವ ಸೂಚಿಸುವ ಸಲುವಾಗಿ ಬಿಜೆಪಿಯು ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗುವಂತೆ ಆಹ್ವಾನವನ್ನು ನೀಡಿದೆ.
ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಸುಮಾರು 7000 ಮಂದಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಆಹ್ವಾನಿತ ಕುಟುಂಬಗಳ ಸದಸ್ಯರು ಮೇ 29 ರಂದು ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಮೇ 30 ರಂದು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಪಶ್ಚಿಮಬಂಗಾಳ ಬಿಜೆಪಿಯ ಪದಾಧಿಕಾರಿಗಳು ಈ ತಂಡದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.