ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕರ್ನಾಟಕದ ಮೂರು ಸಂಸದರಿಗೆ ಸ್ಥಾನ ದೊರಕಿದೆ.
ರಾಜ್ಯ ಬಿಜೆಪಿ ಸಂಸದರಾದ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ, ಬೆಳಗಾವಿ ಸಂಸದ ಸುರೇಶ್ ಅಂಗಡಿ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ನಾಯಕರಿಗೆ ಕರೆ ಮಾಡಿ ಮಾತನಾಡಿದ್ದು, ಇಂದು ಈ ಮೂರು ಸಂಸದರು 4.30 ಕ್ಕೆ ಪ್ರಧಾನಿ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಚಿವ ಸ್ಥಾನ ಸಿಗುವ ವಿಚಾರವನ್ನು ಸ್ವತಃ ಸಂಸದ ಡಿ. ವಿ. ಸದಾನಂದ ಗೌಡ ಅವರೇ ಖಚಿತಪಡಿಸಿದ್ದು, ನನಗೆ ಅಮಿತ್ ಶಾ ಅವರಿಂದ ಕರೆ ಬಂದಿದ್ದು, ಇಂದು ಪ್ರಧಾನಿಯವರ ನಿವಾಸದಲ್ಲಿ ಸಂಜೆ 5 ರೊಳಗೆ ಇರಬೇಕು 7 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ಎಂದು ಹೇಳಿದ್ದಾರೆ. ಸಂಜೆ 5 ಕ್ಕೆ ಪ್ರಧಾನಿಯವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವವರೊಂದಿಗೆ ಚಹಾ ಕೂಟ ನಡೆಸಿ, ನಂತರ ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಮಾಣವಚನ ಸ್ವೀಕರಿಸಲಿದ್ದೇವೆ ಎಂದು ಸಂಸದ ಸದಾನಂದ ಗೌಡ ಅವರು ಹೇಳಿದ್ದಾರೆ.
DV Sadananda Gowda, BJP: I received a call from Amit Shah. He said that I should be there at home office of PM at 5 o’clock&swearing-in ceremony at 7 o’clock. At 5 o’clock PM will have tea with cabinet&other ministerial colleagues&then we’ll go to Rashtrapati Bhavan to take oath. pic.twitter.com/7D49W0C4Tn
— ANI (@ANI) May 30, 2019
ಕರ್ನಾಟಕದ 27 ಲೋಕಸಭಾ ಕ್ಷೇತ್ರಗಳ ಪೈಕಿ 25 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ . ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನವನ್ನು ದೊರಕಿಸಿಕೊಟ್ಟ ರಾಜ್ಯ ಕರ್ನಾಟಕವೊಂದೇ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಸಂಪುಟದಲ್ಲಿ ಉತ್ತಮ ಪಾಲು ದೊರೆಯುವ ನಿರೀಕ್ಷೆ ಇತ್ತು. ಅದರಂತೆ ಮೂರು ಮಂದಿ ಸಂಸದರು ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.