ನವದೆಹಲಿ: ಒಂದು ತಿಂಗಳುಗಳ ಕಾಲ ಯಾವುದೇ ಟಿವಿ ಚರ್ಚೆ ಸಂವಾದಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಕಾಂಗ್ರೆಸ್ ಪ್ರಸ್ತುತ ಆತ್ಮಾವಲೋಕನ ಮಾಡಿಕೊಳ್ಳುವ ಸನ್ನಿವೇಶದಲ್ಲಿ ಇದೆ.
ರಾಹುಲ್ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುವ ಬಗ್ಗೆ ಗೊಂದಲದಲ್ಲಿರುವ ಪಕ್ಷ ಆಂತರಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ಸಮಸ್ಯೆಗಳು ಬಗೆಹರಿಯುವವರೆಗೆ ಟಿವಿ ಚರ್ಚೆಯಲ್ಲಿ ಭಾಗಿಯಾಗದಿರಲು ಪಕ್ಷ ನಿರ್ಧರಿಸಿದೆ.
543 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೇಸ್ ಕೇವಲ 52 ಸ್ಥಾನಗಳನ್ನು ಪಡೆದುಕೊಂಡಿದೆ. ಇದು ಆ ಪಕ್ಷಕ್ಕೆ ತೀವ್ರ ಮುಖಭಂಗವನ್ನುಂಟು ಮಾಡಿದೆ. ಹೀಗಾಗಿ ಮಾಧ್ಯಮಗಳಿಂದ ಕೆಲ ಕಾಲ ದೂರ ಉಳಿಯಲು ಆ ಪಕ್ಷ ನಿರ್ಧರಿಸಿದೆ.
ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷದ ವಕ್ತಾರ ರಂದೀಪ್ ಸುರ್ಜೇವಾಲ ಅವರು,” ಒಂದು ತಿಂಗಳುಗಳ ಕಾಲ ಟಿವಿ ಚರ್ಚೆಗಳಿಗೆ ವಕ್ತಾರರನ್ನು ಕಳುಹಿಸದಿರಲು ಪಕ್ಷ ನಿರ್ಧರಿಸಿದೆ “ಎಂದಿದ್ದಾರೆ.
.@INCIndia has decided to not send spokespersons on television debates for a month.
All media channels/editors are requested to not place Congress representatives on their shows.
— Randeep Singh Surjewala (@rssurjewala) May 30, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.