ನವದೆಹಲಿ: ಈ ಹಿಂದೆ ನರೇಂದ್ರ ಮೋದಿ ಸರ್ಕಾರದಲ್ಲಿ ರಕ್ಷಣಾ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರು ಎರಡನೆಯ ಅವಧಿಯ ಸರ್ಕಾರದಲ್ಲಿ ಹಣಕಾಸು ಖಾತೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಈ ಮೂಲಕ 48 ವರ್ಷಗಳ ಬಳಿಕ ಮಹಿಳೆಯೊಬ್ಬರು ದೇಶದ ಹಣಕಾಸು ಖಾತೆಯನ್ನು ನಿರ್ವಹಣೆ ಮಾಡಲಿದ್ದಾರೆ.
1969 ರ ಜುಲೈ ತಿಂಗಳಿನಿಂದ 1970 ರ ಜೂನ್ ತಿಂಗಳವರೆಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹಣಕಾಸು ಖಾತೆಯನ್ನು ನಿರ್ವಹಣೆ ಮಾಡಿದ್ದರು. ಆದಾದ ಬಳಿಕ ಯಾವ ಮಹಿಳೆಯೂ ವಿತ್ತ ಖಾತೆಯನ್ನು ಹೊಂದಲಿಲ್ಲ.
17ನೇ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ಪಡೆದುಕೊಂಡಿರುವ ನರೇಂದ್ರ ಮೋದಿಯವರು ತಮ್ಮ ಸಂಪುಟ ಸಚಿವರೊಂದಿಗೆ ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇಂದು ಸಚಿವರುಗಳಿಗೆ ಖಾತೆ ಹಂಚಿಕೆಯನ್ನು ಮಾಡಿದ್ದಾರೆ. ಈ ವೇಳೆ ನಿರ್ಮಲಾ ಸೀತಾರಾಮನ್ ಅವರಿಗೆ ಹಣಕಾಸು ಖಾತೆ ಸಿಕ್ಕಿದೆ.
13 ವರ್ಷಗಳ ಹಿಂದೆ ರಾಜಕೀಯ ಪಯಣವನ್ನು ಆರಂಭಿಸಿರುವ ನಿರ್ಮಲಾ ಅವರು, ಇದೀಗ ದೇಶದ ಎರಡನೇ ಮಹಿಳಾ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ನಿರ್ಮಲಾ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಹಣಕಾಸು ಖಾತೆ ಅವರಿಗೆ ದೊರೆತಿರುವುದು ಕನ್ನಡಿಗರಿಗೆ ಹೆಮ್ಮೆ ತಂದಿದೆ. ರಕ್ಷಣಾ ಸಚಿವೆಯಾಗಿಯೂ ಅವರು ದೇಶ ಮೆಚ್ಚುವಂತಹ ಕೆಲಸಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ.
ಮನೆಯ ಅರ್ಥ ವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸುವವಳು ಮಹಿಳೆ. ಇದೀಗ ಮಹಿಳೆಯ ಕೈಗೆ ಈಗ ದೇಶದ ಅರ್ಥ ವ್ಯವಸ್ಥೆ ದೊರಕಿದೆ. ಅದನ್ನು ಅವರು ಅಚ್ಚುಕಟ್ಟಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ಭಾರತೀಯರಿಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.