ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ ಮಾಡುವ ಪ್ರಯತ್ನಕ್ಕೆ ಮಹತ್ವದ ಮುನ್ನಡೆ ದೊರೆತಿದೆ. ವಿವಿಧ ಭಯೋತ್ಪಾದನಾ ಸಂಘಟನೆಗಳಿಗೆ ಸೇರ್ಪಡೆಗೊಂಡಿದ್ದ ಐದು ಮಂದಿ ಕಾಶ್ಮೀರಿ ಯುವಕರು ಈಗ ಶಸ್ತ್ರ ತ್ಯಾಗ ಮಾಡಿ, ಶರಣಾಗತರಾಗಿದ್ದಾರೆ.
ಪೊಲೀಸರು ಮತ್ತು ಕುಟುಂಬದವರ ಪ್ರಯತ್ನದ ಫಲವಾಗಿ ಈ ಯುವಕರು ಭಯೋತ್ಪಾದನೆಯನ್ನು ತ್ಯಜಿಸಿ ಸಮಾಜದ ಮುಖ್ಯ ವಾಹಿನಿಗೆ ಮರಳುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈಗ ಈ ಯುವಕರು ತಮ್ಮ ಕುಟುಂಬದ ಜೊತೆಗೆ ಇದ್ದಾರೆ ಎನ್ನಲಾಗಿದೆ.
ಭದ್ರತಾ ಕಾರಣಗಳಿಗಾಗಿ ಈ ಯುವಕರ ಗುರುತನ್ನು ಬಹಿರಂಗಪಡಿಸದಿರಲು ಪೊಲೀಸರು ನಿರ್ಧರಿಸಿದ್ದಾರೆ. ಹಿಂಸೆಯ ಮಾರ್ಗವನ್ನು ಬಿಡುವಂತೆ ಕುಟುಂಬ ಸದಸ್ಯರು ನಿರಂತರವಾಗಿ ಅಂಗಲಾಚಿದ ಹಿನ್ನಲೆಯಲ್ಲಿ ಮನಕರಗಿ ಇವರು ವಾಪಾಸ್ ಬಂದಿದ್ದಾರೆ ಎನ್ನಲಾಗಿದೆ.
2017 ರಿಂದ ಕಾಶ್ಮೀರ ಕಣಿವೆಯಲ್ಲಿ 12 ಕ್ಕೂ ಅಧಿಕ ಯುವಕರು ಭಯೋತ್ಪಾದನೆಯನ್ನು ತೊರೆದು ಸಮಾಜದ ಮುಖ್ಯ ವಾಹಿನಿಗೆ ಮರಳಿದ್ದಾರೆ. ಇದು ಭದ್ರತಾ ಪಡೆಗಳ ಪ್ರಯತ್ನದ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ.
ಎನ್ಕೌಂಟರ್ ನಡೆಯುತ್ತಿರುವ ಸಂದರ್ಭದಲ್ಲೂ ಬಂದು ಶರಣಾಗುವ ಉಗ್ರರಿಗೂ ನಾವು ಅವಕಾಶವನ್ನು ನೀಡುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.