ನವದೆಹಲಿ: ಬೆಂಗಳೂರಿನ ದೇಗುಲವೊಂದಕ್ಕೆ ವಿಶ್ವರೂಪಿಯಾದ ಮಹಾವಿಷ್ಣುವಿನ 64 ಅಡಿ ಎತ್ತರದ ಏಕಶಿಲಾ ಪ್ರತಿಮೆಯನ್ನು ತರಲಾಗಿದೆ. ಈ ಪ್ರತಿಮೆ 300 ಟನ್ ಭಾರವಿದ್ದು, ವಿವೇಕನಗರ ಪ್ರದೇಶದಲ್ಲಿರುವ ಕೊದಂಡರಾಮಸ್ವಾಮಿ ದೇಗುಲದ ಆವರಣದಲ್ಲಿ ಈ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗುತ್ತಿದೆ.
ವರದಿಗಳ ಪ್ರಕಾರ, ಈ ಪ್ರತಿಮೆ ದೇಗುಲಕ್ಕೆ ಆಗಮಿಸುತ್ತಿದ್ದಂತೆ ಅಪಾರ ಪ್ರಮಾಣದ ಜನರು ಆಗಮಿಸಿ ಇದನ್ನು ಕುತೂಹಲದಿಂದ ವೀಕ್ಷಣೆ ಮಾಡುತ್ತಿದ್ದಾರೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸುತ್ತಿದ್ದಾರೆ.
ತಮಿಳುನಾಡಿನಿಂದ ಈ ಪ್ರತಿಮೆಯನ್ನು ಬೆಂಗಳೂರಿನ ದೇಗುಲಕ್ಕೆ ತರಲಾಗಿದೆ. ಇದನ್ನು ತರಲು 7 ರಿಂದ 8 ತಿಂಗಳುಗಳೇ ಬೇಕಾಯಿತು.
“ಈ ಪ್ರತಿಮೆಗಾಗಿ ಸಾಕಷ್ಟು ಮಂದಿ ಶ್ರಮಿಸಿದ್ದಾರೆ. ತಮಿಳುನಾಡಿನ ಜನರೂ ಇದನ್ನು ಇಲ್ಲಿಗೆ ತರಲು ಸಹಾಯ ಮಾಡಿದ್ದಾರೆ. ಈ ಪ್ರತಿಮೆಯ ಉದ್ದ 64-65 ಅಡಿ ಮತ್ತು ಅಗಲ 26 ಅಡಿ” ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ.
ಪ್ರತಿಮೆಯ ಪ್ರತಿಷ್ಠಾಪನೆಯ ಪ್ರಕ್ರಿಯೆಗೆ ಎರಡರಿಂದ ಮೂರು ತಿಂಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಪ್ರತಿಷ್ಠಾಪನೆ ಪೂರ್ಣಗೊಂಡ ಬಳಿಕ ಪ್ರತಿಮೆಯ ಎತ್ತರ 108 ಆಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.