News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶಿವು ಉಪ್ಪಾರ ಹತ್ಯೆ ಖಂಡಿಸಿ ಪ್ರತಿಭಟನೆ

ಕೊಪ್ಪಳ: ಸಂವಿಧಾನದಲ್ಲಿ ಗೋಹತ್ಯೆ ನಿಷೇಧ ಇದ್ದರೂ ಅದನ್ನು ತಡೆಯುವ ಬದಲು ಗೋ ರಕ್ಷಕರನ್ನೇ ಹತ್ಯೆ ಮಾಡುವ ಕೃತ್ಯಗಳು ನಾಡಿನಲ್ಲಿ ನಡೆದಿವೆ. ಗೋ ರಕ್ಷಕ ಶಿವು ಉಪ್ಪಾರ ಹತ್ಯೆ ಕುರಿತು ಕೂಡಲೇ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.

ಶಿವು ಉಪ್ಪಾರ ಹತ್ಯೆ ಖಂಡಿಸಿ ನಗರದ ಅಶೋಕ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹಿಂದೂಪರ ಸಂಘಟನೆಗಳ ಮುಖಂಡ ಗವಿಸಿದ್ದಪ್ಪ ಜಂತಕಲ್, ರಾಜ್ಯದಲ್ಲಿ ವ್ಯಾಪಕವಾಗಿ ಕಾನೂನು ಬಾಹೀರ ಚಟುವಟಿಕೆಗಳು ನಡೆಯುತ್ತಿವೆ. ಸಮಾಜದ ಸ್ವಾಸ್ಥ್ಯ ಕದಡುವಂತಹ ಹಾಗೂ ಸಮಾಜದಲ್ಲಿ ಭಯ ಹುಟ್ಟಿಸುವಂತ ಕೃತ್ಯಗಳು ಎಗ್ಗಿಲ್ಲದೆ ನಡೆಯುತ್ತಿವೆ. ಸಂವಿಧಾನದ 48 ಕಲಂನಲ್ಲಿ ನಮೂದಿಸುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಗಾಳಿಗೆ ತೂರಿ ಕೆಲ ಮತಾಂಧ ಶಕ್ತಿಗಳು ಹಿಂದೂ ಧರ್ಮದ ಧಾರ್ಮಿಕ ನಂಬಿಕೆಗಳಿಗೆ ಕೊಡಲಿಪೆಟ್ಟು ನೀಡುತ್ತಿವೆ. ಮೊನ್ನೆತಾನೆ ಗೋ ರಕ್ಷಣೆಗೆ ನಿಂತ ಸಹೋದರ ಶಿವು ಉಪ್ಪಾರನನ್ನು ಹತ್ಯೆ ಮಾಡಲಾಯಿತು. ಇದರ ಕುರಿತು ಸಮಗ್ರ ತನಿಖೆ ನಡೆಸಲು ಸಿಬಿಐಗೆ ವಹಿಸಿ ಆತನಿಗೆ ಹಾಗೂ ಆತನ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಶಿವು ಉಪ್ಪಾರ ಹತ್ಯೆ ನೋಡಿ ಕಣ್ಣುಮುಚ್ಚಿ ಕುಳಿತ ರಾಜ್ಯ ಸರ್ಕಾರ ಗೋಪ್ರೇಮಿ, ಗೋ ರಕ್ಷಕ ಶಿವು ಉಪ್ಪಾರ ಹಂತಕರನ್ನು ಮತ್ತು ಹತ್ಯೆಗೆ ಸುಪಾರಿ ಕೊಟ್ಟವರನ್ನು ರಕ್ಷಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ವಿಫಲರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟ ಕಾರಣ ಈ ರೀತಿ ಹತ್ಯೆ ಅಗುತ್ತಿವೆ ಎಂದರು.

ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ರಾಜ್ಯಪಾಲರ ಮಧ್ಯಸ್ಥಿಕೆಯಿಂದ ಸರಿಪಡಿಸಬೇಕು. ಇಲ್ಲದಿದ್ದರೆ ಸಮಾಜವೇ ಸರ್ಕಾರಕ್ಕೆ ತಕ್ಕ ಉತ್ತರ ನೀಡುತ್ತದೆ. ಶಿವು ಉಪ್ಪಾರ ಹತ್ಯೆಗೆ ಕಾರಣರಾದವರನ್ನು ಹಾಗೂ ಈ ಹತ್ಯೆಗೆ ಸುಪಾರಿ ಕೊಟ್ಟ ಬಗ್ಗೆ ಹಲವಾರು ದಾಖಲೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಎಲ್ಲಾ ಸಾಕ್ಷಿಗಳನ್ನು ಗಮನಿಸಿ ಅಪರಾಧಿಗಳನ್ನು ಪತ್ತೆ ಹಚ್ಚಿ ಕಾನೂನು ಪ್ರಕಾರ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಹಿಂದೂ ಜಾಗರಣ ವೇದಿಕೆ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳುತ್ತದೆ ಎಂದು ವೇದಿಕೆಯ ಮುಖಂಡರು ಎಚ್ಚರಿಸಿದರು. ಪ್ರತಿಭಟನೆ ನಂತರ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ತಾಲೂಕು ಪ್ರಧಾನ ಕಾರ್ಯದರ್ಶಿ ಗವಿಸಿದ್ದಪ್ಪ ಗೊರವರ, ಆನಂದ್ ತಳವಾರ, ಉಮೇಶ್‌ಗೌಡ ಪೊಲೀಸ್‌ಪಾಟೀಲ್, ಚನ್ನಪ್ಪಕುಮಾರ್ ಮಜ್ಜಿಗೆ, ಸುನೀಲ್ ಹರಿಜನ, ಮಹಾಂತೇಶ್ ತೇಜು ಇನ್ನಿತರರು ಇದ್ದರು. ಶಿವು ಉಪ್ಪಾರ ಹತ್ಯೆ ಖಂಡಿಸಿ, ಹಂತಕರ ಬಂಧನಕ್ಕೆ ಆಗ್ರಹಿಸಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top