ನವದೆಹಲಿ: ಹೊಸ ಸಂಪುಟ ಸಚಿವರುಗಳ ಮೊದಲ ಸಭೆಯು ಜೂನ್ 12ರಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜರುಗಲಿದೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ, ಮುಂದಿನ ಐದು ವರ್ಷಗಳಲ್ಲಿ ಸರ್ಕಾರದ ಕ್ರಮಗಳ ಹೇಗಿರಬೇಕು ಎಂಬ ಬಗ್ಗೆ ಮಹತ್ವದ ಚರ್ಚೆಗಳು ನಡೆಯಲಿವೆ, ಪ್ರಧಾನಿಯವರು ಈ ಬಗ್ಗೆ ಮಂತ್ರಿಗಳಿಗೆ ವಿವರಿಸಲಿದ್ದಾರೆ ಎಂದು ಹೇಳಲಾಗಿದೆ.
ಹಿಂದಿನ ಮೋದಿ ಸರ್ಕಾರದಲ್ಲೂ ಸಂಪುಟ ಸಚಿವರುಗಳ ಸಭೆಯು ನಿರಂತರವಾಗಿ ಜರುಗುತ್ತಿತ್ತು, ಕೇಂದ್ರ ಕಲ್ಯಾಣ ಯೋಜನೆಗಳ ಬಗ್ಗೆ ಮೋದಿಯವರು ಸಚಿವರುಗಳಿಗೆ ವಿಸ್ತೃತವಾದ ವಿವರಣೆಯನ್ನು ನೀಡಿ, ಅದನ್ನು ಅನುಷ್ಠಾನಗೊಳಿಸಬೇಕಾದ ಬಗೆಯ ಬಗ್ಗೆ ವಿವರಿಸುತ್ತಿದ್ದರು.
ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ, ಕಿಸಾನ್ ಯೋಜನೆಯನ್ನು ಎಲ್ಲಾ ರೈತರಿಗೂ ವಿಸ್ತರಿಸಲು ಮೋದಿ ಅನುಮೋದನೆಯನ್ನು ನೀಡಿದ್ದರು. ಇದರಡಿಯಲ್ಲಿ ವಾರ್ಷಿಕ 6 ಸಾವಿರ ರೂಪಾಯಿಗಳು ಮೂರು ಕಂತುಗಳಲ್ಲಿ ರೈತರನ್ನು ತಲುಪಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.