ನವದೆಹಲಿ: ಎನ್ಡಿಎ ಸರಕಾರದ ಭಯೋತ್ಪಾದನೆ ಬಗೆಗಿನ ಶೂನ್ಯ ಸಹಿಷ್ಣುತೆ ನಿಯಮವು ಜಮ್ಮು-ಕಾಶ್ಮೀರ ರಾಜ್ಯಕ್ಕೂ ಮುಂದುವರೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮಾತ್ರವಲ್ಲದೇ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಣ್ಢ ಮತ್ತು ದೊಡ್ಡ ಪ್ರಕರಣಗಳಲ್ಲೂ ಲಭ್ಯವಿರುವ ಕಾನೂನನ್ನು ಬಳಸಿ ಗರಿಷ್ಠ ಕ್ರಮಕೈಗೊಳ್ಳುವುದು ನಮ್ಮ ಆದ್ಯತೆಯಾಗಿದೆ ಎಂದರು.
ಯಾವುದೇ ಟೀಕೆಗಳಿಂದ ವಿಚಲಿತಗೊಳ್ಳದಂತೆ, ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಮುಂದುವರೆಸುವಂತೆ ಅವರು ಭದ್ರತಾ ಪಡೆಗಳಿಗೆ ಸೂಚಿಸಿದ್ದಾರೆ.
ಸರ್ಕಾರದ ಪ್ರಯತ್ನಗಳು ಜಮ್ಮು ಕಾಶ್ಮೀರದಲ್ಲಿ ಉತ್ತಮ ಫಲಗಳನ್ನೇ ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಈ ವರ್ಷದ ಮೊದಲ ಐದು ತಿಂಗಳ ಅವಧಿಯಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿ 101 ಭಯೋತ್ಪಾದಕರನ್ನು ನೆಲಕ್ಕುರುಳಿಸಿವೆ. ಪ್ರತಿ ತಿಂಗಳು ಸರಾಸರಿ 20 ಭಯೋತ್ಪಾದಕರನ್ನು ಹೊಡೆದುರುಳಿಸಲಾಗುತ್ತಿದೆ.
ಸೋಮವಾರ ಅಮಿತ್ ಶಾ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲರನ್ನು ಭೇಟಿಯಾಗಿದ್ದು ಅವರಿಂದ ಭದ್ರತಾ ಸ್ಥಿತಿಗತಿಗಳ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.