ನವದೆಹಲಿ : ಖ್ಯಾತ ಸಾಹಿತಿ, ಚಿತ್ರ ನಿರ್ದೇಶಕ, ನಾಟಕಕಾರ, ಗಿರೀಶ್ ಕಾರ್ನಾಡ್ ಅವರ ಅಗಲುವಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿಯವರು “ಗಿರೀಶ್ ಕಾರ್ನಾಡ್ ಅವರು ತಮ್ಮ ಬಹುಮುಖಿ ನಟನಾ ಕೌಶಲ್ಯದಿಂದಾಗಿ ಎಲ್ಲಾ ಮಾಧ್ಯಮಗಳಲ್ಲೂ ಸ್ಮರಣೀಯರಾಗಲಿದ್ದಾರೆ. ತಮಗೆ ಹತ್ತಿರದ ವಿಷಯಗಳ ಬಗ್ಗೆ ನೇರವಾಗಿ ಮಾತನಾಡುತ್ತಿದ್ದರು. ಮುಂಬರುವ ವರ್ಷಗಳಲ್ಲೂ ಅವರ ಕಾರ್ಯಗಳು ಜನಪ್ರಿಯವಾಗಿ ಉಳಿಯಲಿದೆ. ಅವರ ಅಗಲುವಿಕೆ ನೋವನ್ನು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ”ಎಂದಿದ್ದಾರೆ.
Girish Karnad will be remembered for his versatile acting across all mediums. He also spoke passionately on causes dear to him. His works will continue being popular in the years to come. Saddened by his demise. May his soul rest in peace.
— Narendra Modi (@narendramodi) June 10, 2019
ರಾಜಕೀಯ ವಲಯದ ಇತರ ಗಣ್ಯಾತಿಗಣ್ಯರು ಕೂಡ ಕಾರ್ನಾಡ್ ಅವರ ಅಗಲುವಿಕೆಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಹಲವು ಸಾಹಿತ್ಯಗಳನ್ನು ರಚನೆ ಮಾಡಿರುವ ಹಲವು ನಾಟಕಗಳಲ್ಲಿ ಚಿತ್ರಗಳಲ್ಲಿ ಅಭಿನಯಿಸಿರುವ ಗಿರೀಶ್ ಕಾರ್ನಾಡ್ ಅವರು ದೀರ್ಘಕಾಲದ ಅನಾರೋಗ್ಯಕ್ಕೆ ತುತ್ತಾಗಿ ಇಂದು ಬೆಳಗ್ಗೆ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.