ನವದೆಹಲಿ: ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರಕಾರವು ಹತಾಶೆಯಲ್ಲಿ ರಾಜಕೀಯ ಹಿಂಸಾಚಾರವನ್ನು ನಡೆಸುತ್ತಿದೆ, ಈ ಮೂಲಕ ತನ್ನದೇ ಅಧಃಪತನಕ್ಕೆ ಕಾರಣವಾಗುತ್ತಿದೆ ಎಂದು ಕೇಂದ್ರ ಸಚಿವ ಸಿಂಗ್ ಕಿಡಿಕಾರಿದ್ದಾರೆ.
ಪಶ್ಚಿಮ ಬಂಗಾಲದಲ್ಲಿ ರಾಜಕೀಯ ಹಿಂಸಾಚಾರಕ್ಕೆ ನಿನ್ನೆ ನಾಲ್ಕು ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
ಹತ್ಯೆಗಳಿಗೆ ಟಿಎಂಸಿಯೇ ಕಾರಣ ಎಂದು ಆರೋಪಿಸಿರುವ ಅವರು, “ಎಡಪಂಥೀಯ ಸರಕಾರವಿದ್ದಾಗ ನಡೆಯುತ್ತಿದ್ದ ಹಿಂಸಾಚಾರವನ್ನು ಮುಂದುವರೆಸಿದ್ದಾರೆ” ಎಂದಿದ್ದಾರೆ.
ಸ್ಥಳೀಯಾಡಳಿತ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆಯವರೆಗೂ ಮಮತಾ ಬ್ಯಾನರ್ಜಿಯವರು ಜನರ ಆಕ್ರೋಶವನ್ನು ಎದುರಿಸುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ ಆದರೆ ಅವರು ಹಿಂಸೆಯನ್ನು ಅಸ್ತ್ರವಾಗಿ ಬಳಸುತ್ತಿದ್ದಾರೆ. ಆಕೆಯ ಅಧಃಪತನ ಆರಂಭಗೊಂಡಿದೆ ಎಂದಿದ್ದಾರೆ.
ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮಬಂಗಾಳದ 42 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿಯು 18 ಸ್ಥಾನಗಳಲ್ಲಿ ಜಯ ಗಳಿಸಿದೆ. ಮಮತಾ ಬ್ಯಾನರ್ಜಿಯವರ ಟಿಎಂಸಿ ಪಕ್ಷವು 22 ಸ್ಥಾನಗಳಲ್ಲಿ ಜಯ ಗಳಿಸಿದೆ. ಬಿಜೆಪಿಯು ತನ್ನ ಪ್ರಮುಖ ಎದುರಾಳಿಯಾಗಿ ಬೆಳೆಯುತ್ತಿರುವುದು ಮಮತಾ ಅವರ ಹತಾಶೆಗೆ ಕಾರಣವಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.