ಲಕ್ನೋ: ಆಹಾರ ಧಾನ್ಯಗಳಲ್ಲಿ ದೇಶವು ಸ್ವಾವಲಂಬನೆಯನ್ನು ಪಡೆಯಬೇಕಾದರೆ ರೈತರ ಕೊಡುಗೆ ಮಹತ್ತರವಾಗಿರುತ್ತದೆ ಎಂಬುದಾಗಿ ಪ್ರತಿಪಾದಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ರೈತರು ಬೆಳೆದ ಬೆಳೆಗೆ ಸಮರ್ಪಕವಾದ ದರ ಸಿಗುವಂತೆ ಮಾಡುತ್ತೇನೆ ಎಂಬ ಭರವಸೆಯನ್ನು ನೀಡಿದ್ದಾರೆ.
ಲಕ್ನೋದ ಲೋಕ ಭವನದಲ್ಲಿ ರೈತರ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, “ಎಲ್ಲಾ ಸಂದರ್ಭದಲ್ಲೂ ಸರ್ಕಾರ ರೈತರ ಪರವಾಗಿ ನಿಲ್ಲುತ್ತದೆ ಮತ್ತು ಅವರ ಪರಿಶ್ರಮವನ್ನು ವ್ಯರ್ಥವಾಗಲು ಸರಕಾರ ಎಂದಿಗೂ ಬಿಡಲಾರದು” ಎಂದಿದ್ದಾರೆ.
“ಪರಿಸ್ಥಿತಿಯಿಂದ ತಪ್ಪಿಸಿಕೊಳ್ಳುವುದು ಅಥವಾ ವಲಸೆ ಹೋಗುವುದೇ ಜೀವನವಲ್ಲ, ಸವಾಲುಗಳ ವಿರುದ್ಧ ಹೋರಾಡುವುದೇ ಜೀವನ. ನಿಮ್ಮ ಪರಿಶ್ರಮ ವ್ಯರ್ಥವಾಗಲು ನಾವು ಬಿಡುವುದಿಲ್ಲ” ಎಂದಿದ್ದಾರೆ.
“ನಿಮ್ಮೆಲ್ಲರೊಂದಿಗೆ ಎಲ್ಲಾ ಸಂದರ್ಭದಲ್ಲೂ ದೃಢವಾಗಿ ನಿಲ್ಲುತ್ತೇವೆ. ನೀವು ಬೆಳೆದ ಬೆಳೆಗೆ ಸರಿಯಾದ ದರವನ್ನು ನೀಡುವುದು ನಮ್ಮ ಜವಾಬ್ದಾರಿ. ರೈತರ ಉದ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಕಟಿಬದ್ಧರಾಗಿದ್ದಾರೆ” ಎಂದಿದ್ದಾರೆ.
“ರೈತರ ಪರಿಶ್ರಮದಿಂದಾಗಿ ದೇಶವು ಆಹಾರ ಧಾನ್ಯಗಳಲ್ಲಿ ಸ್ವಾವಲಂಬನೆಯನ್ನು ಸಾಧಿಸುತ್ತಿದೆ”ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.