ಹೈದರಾಬಾದ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಅಲ್ಲಿನ ಶೇ.40 ರಷ್ಟು ಮುಸ್ಲಿಂ ಜನಸಂಖ್ಯೆ ಕಾರಣ ಎಂಬುದಾಗಿ AIMIM ಪಕ್ಷದ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ಹೇಳಿದ್ದಾರೆ.
“ಮುಸ್ಲಿಂರಿಗೆ ಕಾಂಗ್ರೆಸ್ ಮತ್ತು ಇತರ ಜಾತ್ಯಾತೀತ ಪಕ್ಷಗಳನ್ನು ಬಿಟ್ಟು ಬರಲು ಮನಸ್ಸಿಲ್ಲ ಆದರೆ ಇಂದು ಬಿಜೆಪಿಯನ್ನು ಎದುರಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿಲ್ಲ. ಪಂಜಾಬ್ ಸೇರಿದಂತೆ ಇತರ ಕೆಲವು ಕಡೆಗಳಲ್ಲಿ ಬಿಜೆಪಿ ಸೋಲು ಕಾಣಲು ಪ್ರಾದೇಶಿಕ ಪಕ್ಷಗಳು ಕಾರಣವೇ ಹೊರತು ಕಾಂಗ್ರೆಸ್ ಅಲ್ಲ ಎಂಬುದನ್ನು ನಾವು ತಿಳಿದುಕೊಳ್ಳಬೇಕು” ಎಂದು ಮುಸ್ಲಿಂರಿಗೆ ಓವೈಸಿ ಹೇಳಿದ್ದಾರೆ.
ಯಾರ ಮೇಲೂ ಅವಲಂಬನೆಯಾಗದೇ ಮುಸ್ಲಿಂ ಸಮುದಾಯ ದೇಶದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆಯುತ್ತದೆ ಎಂಬ ಭರವಸೆ ನನಗಿದೆ ಎಂಬುದಾಗಿ ಹೇಳಿದ್ದಾರೆ.
“ಹಲವಾರು ವರ್ಷಗಳಿಂದ ಪ್ರತಿನಿಧಿಸುತ್ತಿದ್ದ ಅಮೇಥಿಯಲ್ಲಿ ರಾಹುಲ್ ಗಾಂಧಿ ಅವರು ಸೋಲು ಕಂಡಿದ್ದಾರೆ. ಆದರೆ ಕೇರಳದ ವಯನಾಡಿನಲ್ಲಿ ಅವರು ಜಯಗಳಿಸಿದ್ದಾರೆ. ಇದಕ್ಕೆ ಕಾರಣ ಅಲ್ಲಿರುವ ಶೇ. 40ರಷ್ಟು ಮುಸ್ಲಿಂರು ಅವರಿಗೆ ಮತ ಹಾಕಿದ್ದು” ಎಂದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರು ವಯನಾಡಿನಲ್ಲಿ 7,05,034 ಮತಗಳನ್ನು ಪಡೆದುಕೊಂಡಿದ್ದಾರೆ. ತಮ್ಮ ಸಮೀಪದ ಎಲ್ಡಿಎಫ್ ಅಭ್ಯರ್ಥಿಯನ್ನು ಅವರು 4,31,063 ಮತಗಳಿಂದ ಸೋಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.