ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸುವ ಸಲುವಾಗಿ, ಜೂನ್ 16ರಿಂದ ರಾಜ್ಯಾದ್ಯಂತ ಪ್ರವಾಸಕೈಗೊಂಡು ಖುದ್ದು ಭದ್ರತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಲಿದ್ದಾರೆ.
ಅವರು ರಾಜ್ಯದ ಬಹುತೇಕ ಎಲ್ಲಾ ಪ್ರಮುಖ ಜಿಲ್ಲೆಗಳಿಗೂ ಭೇಟಿಯನ್ನು ನೀಡಿ ಗ್ರಾಮಸ್ಥರೊಂದಿಗೆ ಚೌಪಲ್ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪೊಲೀಸ್ ಸ್ಟೇಶನ್, ಆಸ್ಪತ್ರೆ, ತೆಹ್ಸೀಲ್ ಮತ್ತು ಪ್ರಾಥಮಿಕ ಶಾಲೆಗಳ ಸ್ಥಿತಿಗತಿಗಳನ್ನು ಖುದ್ದಾಗಿ ಪರಿಶೀಲನೆಗೆ ಒಳಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಕುಗ್ರಾಮ ಪ್ರದೇಶಗಳಲ್ಲಿ ನಡೆಸಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆಯೂ ಅವರು ಪರಿಶೀಲನೆ ನಡೆಸಲಿದ್ದಾರೆ. ಯಾವುದೇ ಹಿರಿಯ ಅಧಿಕಾರಿಗಳಿಗೆ ಅಥವಾ ಜಿಲ್ಲಾಡಳಿತಗಳಿಗೆ ತಿಳಿಸದೆಯೇ ಯೋಗಿ ಪೊಲೀಸ್ ಸ್ಟೇಶನ್, ಪ್ರಾಥಮಿಕ ಶಾಲೆ ಮತ್ತು ತೆಹ್ಸೀಲ್ ಗಳಿಗೆ ಸರ್ಪ್ರೈಝ್ ಭೇಟಿಯನ್ನು ನೀಡಲಿದ್ದಾರೆ ಎನ್ನಲಾಗಿದೆ.
ಈ ಪ್ರವಾಸವನ್ನು ಕೈಗೊಳ್ಳುವ ಸಂದರ್ಭದಲ್ಲಿ ಯೋಗಿ ಅವರಿಗೆ ಕಮಿಷನರ್ ಮತ್ತು ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೂಡ ಸಾಥ್ ನೀಡಲಿದ್ದಾರೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.