ಮಂಗಳೂರು : ಕಾಲೇಜಿನ ಇಂಗ್ಲೀಷ್ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾಲಯ ಇಂಗ್ಲೀಷ್ ಉಪನ್ಯಾಸಕರ ಸಂಘದ ವತಿಯಿಂದ ವಿಶ್ವವಿದ್ಯಾಲಯದ ಪದವಿ ತರಗತಿಯ ತೃತೀಯ ಸೆಮಿಸ್ಟರ್ನ ಪರಿಷ್ಕೃತ ಇಂಗ್ಲೀಷ್ ಪಠ್ಯಕ್ರಮವನ್ನು ಪರಿಚಯಿಸಿ ಬೋಧನೆಯ ವಿಷಯದಲ್ಲಿ ಮಾಹಿತಿ ನೀಡುವ ಸಲುವಾಗಿ ಇಂಗ್ಲೀಷ್ ಭಾಷಾ ಉಪನ್ಯಾಸಕರಿಗೆ ಜು.1ರಂದು ಬೆಸೆಂಟ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಗಾರವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಗಾರದಲ್ಲಿ ಉಪನ್ಯಾಸಕರಿಗೆ ಹೊಸ ಘಟಕಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೊಟ್ಟು ಬೋಧನೆಯನ್ನು ಪರಿಣಾಮಕಾರಿಯಾಗಿಸುವ ಪ್ರಯತ್ನ ಮಾಡಲಾಗುವುದು.
ಕಾರ್ಯಗಾರವನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಸುಧಾ ಕೆ ಉದ್ಘಾಟಿಸಲಿರುವರು. ಶ್ರೀ ಶ್ಯಾಮ್ ಸುಂದರ್ ಕಾಮತ್ ಡಬ್ಲೂ ಎನ್ಇಎಸ್ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಶ್ರೀ ಕೆ. ದೇವಾನಂದ ಸಂಚಾಲಕರು ಉಪಸ್ಥಿತರಿರುವರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.