ಪಾಟ್ನಾ: ತಂದೆ ತಾಯಿಯನ್ನು ನೋಡಿಕೊಳ್ಳದೆ ಅನಾಥರನ್ನಾಗಿಸುವ ಮಕ್ಕಳಿಗೆ ಕಠಿಣಾತಿ ಕಠಿಣ ಶಿಕ್ಷೆಯನ್ನು ನೀಡಲು ಬಿಹಾರ ನಿರ್ಧರಿಸಿದೆ. ವಯಸ್ಸಾದ ಕಾಲದಲ್ಲಿ ಹೆತ್ತವರನ್ನು ತೊರೆಯುವ ಮಕ್ಕಳಿಗೆ ಜೈಲು ಶಿಕ್ಷೆಯನ್ನು ವಿಧಿಸುವ ಪ್ರಸ್ತಾಪಕ್ಕೆ ಬಿಹಾರ ಸಂಪುಟ ಸಮ್ಮತಿಯನ್ನು ನೀಡಿದೆ.
ವಯಸ್ಸಾದ ತಂದೆ ಮತ್ತು ತಾಯಿಯನ್ನು ಆರೈಕೆ ಮಾಡದೆ ಅನಾಥರನ್ನಾಗಿಸುವ ಮಗಳು ಅಥವಾ ಮಗನಿಗೆ ಗರಿಷ್ಠ ಜೈಲು ಶಿಕ್ಷೆಯನ್ನು ವಿಧಿಸುವ ಪ್ರಸ್ತಾಪವನ್ನು ಸಮಾಜ ಕಲ್ಯಾಣ ಇಲಾಖೆ ಸಂಪುಟದ ಮುಂದಿಟ್ಟಿತ್ತು. ಇದಕ್ಕೆ ಸಂಪುಟವು ಅನುಮೋದನೆಯನ್ನು ನೀಡಿದೆ.
ಮಂಗಳವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತಾದ ಪ್ರಸ್ತಾಪಕ್ಕೆ ಸಂಪುಟವು ಅನುಮೋದನೆಯನ್ನು ನೀಡಿದೆ.
ಯಾವುದೇ ವೃದ್ಧ ದಂಪತಿ, ತಮ್ಮ ಮಕ್ಕಳು ತಮ್ಮನ್ನು ನೋಡಿಕೊಳ್ಳುತ್ತಿಲ್ಲ ಎಂದು ದೂರನ್ನು ದಾಖಲು ಮಾಡಿದ ಪಕ್ಷದಲ್ಲಿ ಅಂತಹ ಮಕ್ಕಳ ವಿರುದ್ಧ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಬಂಧಿಸಲಾಗುತ್ತದೆ ಎಂದು ಹೇಳಲಾಗಿದೆ.
ಈ ನಿರ್ಧಾರದ ಮೂಲಕ ಬಿಹಾರ ಸರ್ಕಾರವು, ತಂದೆ ತಾಯಿಯನ್ನು ಅನಾಥರನ್ನಾಗಿಸುವ ಮಕ್ಕಳಿಗೆ ಎಚ್ಚರಿಕೆಯ ಸಂದೇಶವನ್ನೇ ರವಾನಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.