ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷರಿಗೆ ಟೀಮ್ ಇಂಡಿಯಾ ಸಹಿಯುಳ್ಳ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದು, ಮೋದಿಯವರು ‘ಕ್ರಿಕೆಟ್ ರಾಜತಾಂತ್ರಿಕತೆ’ಯನ್ನು ಕೊಂಡಾಡಿದ್ದಾರೆ.
ಟ್ವಿಟ್ ಮಾಡಿರುವ ಸಚಿನ್, “ಕ್ರಿಕೆಟ್ ಅನ್ನು ಪ್ರಚುರಪಡಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೊದಿಯವರಿಗೆ ಧನ್ಯವಾದ. ಕ್ರಿಕೆಟ್ ವಿಶ್ವಕಪ್ ಸಂದರ್ಭದಲ್ಲಿ ಅತ್ಯಂತ ಕ್ರಿಕೆಟ್ ರಾಜತಾಂತ್ರಿಕತೆಗೆ ಇದು ಉತ್ತಮ ಉದಾಹರಣೆ” ಎಂದಿದ್ದಾರೆ. ಮಾತ್ರವಲ್ಲ, ಹತ್ತಿರದಲ್ಲೇ ಮಾಲ್ಡೀವ್ಸ್ ಕೂಡ ಕ್ರಿಕೆಟ್ ಭೂಪಟದಲ್ಲಿ ಇರಲಿದೆ ಎಂಬ ವಿಶ್ವಾಸವನ್ನು ಕ್ರಿಕೆಟ್ ಮಾಂತ್ರಿಕ ವ್ಯಕ್ತಪಡಿಸಿದ್ದಾರೆ.
ಕಳೆದ ಶನಿವಾರ ಮಾಲ್ಡೀವ್ಸ್ ಭೇಟಿ ನೀಡಿದ್ದ ಪ್ರಧಾನಿಯವರು, ಅಲ್ಲಿನ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರಿಗೆ ಭಾರತೀಯ ಕ್ರಿಕೆಟಿಗರು ಸಹಿ ಮಾಡಿದ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದರು. “ಕ್ರಿಕೆಟ್ ನಿಂದ ಬೆಸೆದುಕೊಂಡಿದ್ದೇವೆ. ನನ್ನ ಗೆಳೆಯ ಸೊಲಿಹ್ ಕ್ರಿಕೆಟ್ ಅಭಿಮಾನಿ. ಹೀಗಾಗಿ ಅವರಿಗೆ ವಿಶ್ವಕಪ್ ತಂಡದಲ್ಲಿರುವ ಭಾರತೀಯ ಆಟಗಾರರು ಸಹಿ ಹಾಕಿದ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದೆ” ಎಂದು ಮೋದಿ ಟ್ವಿಟ್ ಮಾಡಿದ್ದರು.
ಮಾಲ್ಡೀವ್ಸ್ ನಲ್ಲಿ ಭಾರತ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಯೋಜನೆಯನ್ನು ರೂಪಿಸುತ್ತಿದೆ ಎಂದು ವಿದೇಶಾಂಗ ವಕ್ತಾರ ವಿಜಯ್ ಗೋಖಲೆ ಹೇಳಿದ್ದಾರೆ.
ಕಳೆದ ಮೇ ತಿಂಗಳಿನಲ್ಲಿ ಬಿಸಿಸಿಐ ಮಾಲ್ಡೀವ್ಸ್ ಗೆ ಭೇಟಿ ನೀಡಿ ಅಲ್ಲಿನ ಕ್ರಿಕೆಟಿಗರಿಗೆ ತರಬೇತಿಯನ್ನು ನೀಡಿದೆ. ಕೋಚಿಂಗ್ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸಿದೆ ಮತ್ತು ಕಿಟ್ ಗಳನ್ನು ಪೂರೈಸಿದೆ.
Thank you for promoting cricket, @narendramodi ji.
Good example of cricket diplomacy during the @cricketworldcup. Hoping to see Maldives on the 🏏 map soon. https://t.co/wek7p88828— Sachin Tendulkar (@sachin_rt) June 11, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.