ಚೆನ್ನೈ: ತಮಿಳುನಾಡಿನ ರಾಧಕೃಷ್ಣ ನಗರದ ಉಪಚುನಾವಣೆಯ ಮತಯೆಣಿಕೆ ಕಾರ್ಯ ಮುಕ್ತಾಯವಾಗಿದ್ದು, ಮುಖ್ಯಮಂತ್ರಿ ಜಯಲಲಿತಾ ಅವರು ಅಭೂತಪೂರ್ವ ಯಶಸ್ಸನ್ನು ಸಾಧಿಸಿದ್ದಾರೆ.
ಸಿಪಿಐನ ಮಹೇಂದ್ರನ್ ಅವರನ್ನು ಬರೋಬ್ಬರಿ 1,51,252 ಮತಗಳ ಅಂತರದಿಂದ ಜಯಲಲಿತಾ ಸೋಲಿಸಿದ್ದಾರೆ. ಈ ಮೂಲಕ ಶಾಸಕ ಸ್ಥಾನವನ್ನು ಮರಳಿ ಪಡೆದಿದ್ದಾರೆ.
ಜಯಾ ಗೆಲುವು ಸಾಧಿಸುತ್ತಿದ್ದಂತೆ ಅವರ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ. ಗೆಲುವಿಗೆ ಕಾರಣೀಕರ್ತರಾದ ಅಭಿಮಾನಿಗಳಿಗೆ, ಪಕ್ಷದ ಕಾರ್ಯಕರ್ತರಿಗೆ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಶೇಷ ಕೋರ್ಟ್ನಿಂದ ನಾಲ್ಕು ವರ್ಷ ಜೈಲು ಶಿಕ್ಷೆ ಗುರಿಯಾಗಿದ್ದರಿಂದ ಜಯಾ ಅವರ ಸದಸ್ಯತ್ವ ರದ್ದುಗೊಂಡಿತ್ತು. ಬಳಿಕ ಹೈಕೋರ್ಟ್ ಕ್ಲೀನ್ಚಿಟ್ ಪಡೆದ ಅವರು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಇದೀಗ ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತಮಿಳುನಾಡು ವಿಧಾನಸಭೆಗೆ ಮರು ಆಯ್ಕೆಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.