ನವದೆಹಲಿ: ಪಶ್ಚಿಮಬಂಗಾಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರುಗಳಿಗೆ ಬೆಂಬಲವನ್ನು ಸೂಚಿಸುವ ಸಲುವಾಗಿ ಶುಕ್ರವಾರ ಹಲವು ರಾಜ್ಯಗಳಲ್ಲಿ ವೈದ್ಯರುಗಳು ತಮ್ಮ ಕರ್ತವ್ಯವವನ್ನು ಬಿಟ್ಟು ಪ್ರತಿಭಟನೆಗಳಲ್ಲಿ ಭಾಗಿಯಾದರು. ಮುಂಬಯಿ, ದೆಹಲಿ, ಬೆಂಗಳೂರು, ಹೈದರಾಬಾದ್, ಜೈಪುರ, ತಿರುವನಂತಪುರಂ ಮತ್ತು ಇತರ ಕಡೆಗಳಲ್ಲಿ ಅಪಾರ ಸಂಖ್ಯೆಯ ವೈದ್ಯರುಗಳು ಬೀದಿಗಿಳಿಸು ಪ್ರತಿಭಟನೆಯನ್ನು ನಡೆಸಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರುಗಳು ತಲೆಗೆ ಹೆಲ್ಮೆಟ್ ಮತ್ತು ಹಣೆಗೆ ಬ್ಯಾಂಡೆಜ್ ಕಟ್ಟಿಕೊಂಡು ರೋಗಿಗಳಿಗೆ ಚಿಕಿತ್ಸೆಯನ್ನು ನೀಡುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು.
ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮೃತ ರೋಗಿಯ ಸಂಬಂಧಿಕರು ಕಿರಿಯ ವೈದ್ಯರ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದನ್ನು ಖಂಡಿಸಿ ಪಶ್ಚಿಮಬಂಗಾಳದ ವೈದ್ಯರುಗಳು ಮಂಗಳವಾರದಿಂದ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ನಮಗೆ ಸೂಕ್ತವಾದ ಭದ್ರತೆಯನ್ನು ಒದಗಿಸುತ್ತೇವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಭರವಸೆ ನೀಡದ ಹೊರತು ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ವೈದ್ಯರು ಪಟ್ಟು ಹಿಡಿದಿದ್ದಾರೆ.
ಆದರೆ ಮಮತಾ ಮಾತ್ರ, ಈ ಪ್ರತಿಭಟನೆಯ ಹಿಂದೆ ಬಿಜೆಪಿ ಮತ್ತು ಎಡ ಪಕ್ಷಗಳ ಕೈವಾಡವಿದೆ. ವೈದ್ಯರುಗಳನ್ನು ಬಳಸಿಕೊಂಡು ಇವುಗಳು ‘ಹಿಂದೂ-ಮುಸ್ಲಿಂ ರಾಜಕೀಯ’ವನ್ನು ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು, ಪ್ರತಿಭಟನಾನಿರತ ವೈದ್ಯರುಗಳನ್ನು ಭೇಟಿಯಾಗಿ ಮಾತುಕತೆಯನ್ನು ನಡೆಸಿದ್ದಾರೆ. ಪ್ರತಿಭಟನೆಗೆ ಮಮತಾ ಬ್ಯಾನರ್ಜಿಯವರೇ ನೇರ ಹೊಣೆ ಎಂದಿದ್ದಾರೆ.
“ವೈದ್ಯರುಗಳಿಗೆ ಮಮತಾ ಬ್ಯಾನರ್ಜಿಯವರು ಬೆದರಿಕೆಯೊಡ್ಡುತ್ತಿರುವುದರಿಂದಲೇ ಇಂದು ರಾಷ್ಟ್ರವ್ಯಾಪಿಯಾಗಿ ವೈದ್ಯರುಗಳು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ವೈದ್ಯರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಜರುಗಿಸುವ ಬದಲು ಮಮತಾ ಅವರು ವೈದ್ಯರುಗಳಿಗೆಯೇ ಬೆದರಿಕೆ ಹಾಕುತ್ತಿದ್ದಾರೆ. ಒಬ್ಬ ಮುಖ್ಯಮಂತ್ರಿಯಾಗಿ ಅವರು ಸೂಕ್ಷತೆಯಿಂದ ವರ್ತಿಸಿದರೆ ಮತ್ತು ತನ್ನ ಧೋರಣೆಯನ್ನು ಬದಲಾಯಿಸಿಕೊಂಡರೆ, ಇಡೀ ದೇಶದ ರೋಗಿಗಳು ಸಂಕಷ್ಟಕ್ಕೀಡಾಗುವುದು ತಪ್ಪುತ್ತದೆ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.