ನವದೆಹಲಿ: ಎಲ್ಲರಿಗೂ ವಸತಿ ಗುರಿಯನ್ನು ಕೇಂದ್ರ ಸರ್ಕಾರ 2022ರ ಬದಲಾಗಿ 2020ರ ವೇಳೆಗೆಯೇ ತಲುಪಲಿದೆ ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
2019ರ ಲೋಕಸಭಾ ಚುನಾವಣೆ ಘೋಷಣೆಯಾಗುವುದಕ್ಕಿಂತಲೂ ಮುನ್ನವೇ 83 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆ ವಿಶ್ವದಲ್ಲೇ ಅತ್ಯಂತ ತ್ವರಿತವಾಗಿ ಅನುಷ್ಠಾನಗೊಂಡ ಯೋಜನೆಯಾಗಿದೆ.ಈ ವರ್ಷದ ಡಿಸೆಂಬರ್ ವೇಳೆಗೆ ಸ್ಮಾರ್ಟ್ ಸಿಟಿಗಳಲ್ಲಿ 50 ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಸ್ಥಾಪನೆಯಾಗಲಿದೆ ಎಂದಿದ್ದಾರೆ.
ರಿಯಲ್ ಎಸ್ಟೇಟ್ ವಲಯದ ಸ್ಥಿತಿಗತಿ ಕೂಡ ಮುಂಬರುವ ದಿನಗಳಲ್ಲಿ ಸುಧಾರಿಸಲಿದೆ, ಅದು ಸ್ಥಿರತೆ ಮತ್ತು ಆರ್ಡರ್ ಅನ್ನು ಹೊಂದಿರಲಿದೆ ಎಂದಿದ್ದಾರೆ.
2024ರ ವೇಳೆಗೆ ಭಾರತ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಕೈಗಾರಿಕೆಗಳ ಪ್ರಗತಿಗೆ ಪೂರಕವಾದ ಉತ್ತಮ ವಾತಾವರಣವನ್ನು ಸರ್ಕಾರ ಕಲ್ಪಿಸಿಕೊಡಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.