ಅಯೋಧ್ಯಾ: ಹಿಂದೂಗಳ ಪವಿತ್ರ ನಗರ, ಶ್ರೀರಾಮನ ಜನ್ಮ ಕ್ಷೇತ್ರ ಅಯೋಧ್ಯಾಗೆ ಉಗ್ರರ ಕರಿ ನೆರಳು ಬಿದ್ದಿದೆ. ಈ ನಗರದ ಮೇಲೆ ದಾಳಿಗಳನ್ನು ನಡೆಸಲು ಭಯೋತ್ಪಾದನಾ ಸಂಘಟನೆಗಳು ಸಂಚು ರೂಪಿಸುತ್ತಿವೆ ಎಂಬ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿದ್ದು, ಈ ಹಿನ್ನಲೆಯಲ್ಲಿ ಅಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ವರದಿಗಳ ಪ್ರಕಾರ, ನೆರೆಯ ನೇಪಾಳದ ಮೂಲಕ ಒಳನುಸುಳಿ ಬಂದು ಉಗ್ರರು ಅಯೋಧ್ಯಾದಲ್ಲಿ ಬೃಹತ್ ದಾಳಿಯನ್ನು ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಮಾಹಿತಿಯನ್ನು ನೀಡಿದೆ.
ಗುಪ್ತಚರ ಮಾಹಿತಿಯ ಹಿನ್ನಲೆಯಲ್ಲಿ, ಅಯೋಧ್ಯಾದಾದ್ಯಂತ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದ್ದು, ಅರೆಸೇನಾ ಪಡೆಗಳನ್ನು ನಿಯೋಜನೆಗೊಳಿಸಲಾಗಿದೆ. ಸದಾ ಕಣ್ಗಾವಲಿನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಅಯೋಧ್ಯೆಗೆ ಬರುವ ರೈಲು ಮತ್ತು ಬಸ್ಸುಗಳಲ್ಲಿ, ಹೊಟೇಲ್, ನಗರದ ಜನನಿಬಿಡ ಪ್ರದೇಶಗಳು, ಲಾಡ್ಜ್ ಗಳು ಮತ್ತು ಅತಿಥಿ ಗೃಹಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಇನ್ನು ಶನಿವಾರ ರಂಜನ್ ಮಬುಮಿ ನ್ಯಾಸ್ ಮುಖ್ಯಸ್ಥ ಮಹಾಂತ್ ನೃತ್ಯ ಗೋಪಾಲ್ ದಾಸ್ ಅವರು 81ನೇ ಜಯಂತಿಯನ್ನು ಆಚರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್ ಶರ್ಮ, ಕೇಶವ ಮೌರ್ಯ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮುಂತಾದ ಗಣ್ಯರು ಅಯೋಧ್ಯೆಗೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ವಿಚಕ್ಷಣ ಮತ್ತು ಗಸ್ತು ತಿರುಗುವಿಕೆಯನ್ನೂ ದುಪ್ಪಟ್ಟುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.