ಜಕಾರ್ತ: ಇಂಡೋನೇಷ್ಯಾದ ಸಮುತ್ರಾ ದ್ವೀಪದ ಜನನಿಬಿಡ ಪ್ರದೇಶದಲ್ಲಿ ಮಂಗಳವಾರ ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ಇದರಿಂದಾಗಿ ಕನಿಷ್ಠ ೩೮ ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಮಧ್ಯಾಹ್ನ ಈ ಘಟನೆ ನಡೆದಿದ್ದು, ಹಲವು ಮನೆಗಳು, ಕಟ್ಟಡಗಳು ಜಖಂಗೊಂಡಿದೆ. ಈ ಸರಕು ಸಾಗಣೆ ವಿಮಾನದಲ್ಲಿ 12 ಮಂದಿ ಸಿಬ್ಬಂದಿ ಇದ್ದರು. ತಾಂತ್ರಿಕ ಸಮಸ್ಯೆಯಿಂದ ವಿಮಾನ ಸುಮಾತ್ರ ದ್ವೀಪದ ಸಮೀಪ ಜನವಸತಿ ಪ್ರದೇಶದಲ್ಲಿ ಪತನಗೊಂಡಿದೆ.
ಪತನಗೊಳ್ಳುವ ಕೆಲವೇ ಕ್ಷಣಗಳ ಮುನ್ನ ಪೈಲಟ್, ನಿಲ್ದಾಣದಲ್ಲಿನ ನಿಯಂತ್ರಣ ಕೊಠಡಿಗೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇದೆ ಎನ್ನುವ ತುರ್ತು ಸಂದೇಶ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.