ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ಶನಿವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು, ಬರ ಪರಿಸ್ಥಿತಿ, ನರೇಗಾ ಬಾಕಿ ಅನುದಾನ ಬಿಡುಗಡೆ ಹಾಗೂ ಸಾಲಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನದ ಕುರಿತು ಚರ್ಚೆ ನಡೆಸಿದರು.
ಇಂದು ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಕುಮಾರ ಸ್ವಾಮಿಯವರು ದೆಹಲಿಗೆ ತೆರಳಿದ್ದು, ಈ ವೇಳೆ ಪ್ರಧಾನಿವರನ್ನು ಭೇಟಿಯಾಗಿ ಎರಡನೇಯ ಅವಧಿಗೆ ಆಯ್ಕೆಯಾದುದಕ್ಕೆ ಅಭಿನಂದನೆಗಳನ್ನು ತಿಳಿಸಿದರು.
ಈ ವರ್ಷ ರಾಜ್ಯದಲ್ಲಿ ಬರಪರಿಸ್ಥಿತಿ ಕಾಣಿಸಿಕೊಂಡಿದ್ದು, ಶೇ.45ರಷ್ಟು ಮಳೆಯ ಕೊರತೆಯಾಗಿದೆ. ಹೀಗಾಗಿ ಕೇಂದ್ರದ ನೆರವನ್ನು ನೀಡಬೇಕು ಎಂದು ಕುಮಾರಸ್ವಾಮಿ ಪ್ರಧಾನಿಗಳ ಬಳಿ ಮನವಿಯನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮುನ್ನ ಕುಮಾರಸ್ವಾಮಿಯವರು ನೀತಿ ಆಯೋಗದ ಸಭೆಯ ಹಿನ್ನಲೆಯಲ್ಲಿ, ಮಧ್ಯಪ್ರದೇಶ, ರಾಜಸ್ಥಾನ, ಪುದುಚೇರಿ ಮುಖ್ಯಮಂತ್ರಿಗಳ ಜೊತೆಗೂಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅವರಿಂದ ಹಲವಾರು ಸಲಹೆಗಳನ್ನು ಪಡೆದರು ಎನ್ನಲಾಗಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ಜರುಗಲಿದೆ. ಪಶ್ಚಿಮಬಂಗಾಳ ಹೊರತುಪಡಿಸಿ ಉಳಿದೆಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.