ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶನಿವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.
ಈ ವೇಳೆ ಕುಮಾರಸ್ವಾಮಿಯವರು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನೇಮಕಾತಿ ಮಾಡುವ ಸಂದರ್ಭದಲ್ಲಿ ಸ್ಥಳೀಯ ಭಾಷೆಯ ಬಗ್ಗೆ ಸ್ಪಷ್ಟ ಜ್ಞಾನ ಹೊಂದಿರುವ ಸ್ಥಳೀಯರಿಗೆ ಅವಕಾಶ ನೀಡುವಂತೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ ನಿಯಮಗಳಿಗೆ ತಿದ್ದುಪಡಿ ತರಬೇಕು. ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳನ್ನು ಸಂವಿಧಾನದ ಮಾನ್ಯತೆ ಪಡೆದುಕೊಂಡಿರುವ ಎಲ್ಲಾ 22 ಭಾಷೆಗಳಲ್ಲಿ ನಡೆಸಬೇಕು ಎಂದು ಮನವಿ ಮಾಡಿಕೊಂಡರು.
ಅಲ್ಲದೇ, ಕೇಂದ್ರ ಸರ್ಕಾರ ನಡೆಸುವ ಎಲ್ಲಾ ಇಲಾಖಾ ನೇಮಕಾತಿಗಳಲ್ಲೂ ಸ್ಥಳಿಯರಿಗೆ ಹೆಚ್ಚಿನ ಅವಕಾಶಗಳು ಸಿಗುವಂತೆ ಮಾಡುವ ನಿಯಮಗಳನ್ನು ಜಾರಿಗೆ ತರಬೇಕು ಎಂದು ಅವರು ಮನವಿ ಮಾಡಿಕೊಂಡರು.
ಭೇಟಿಯ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾಕ್ಟರ್ ಇ.ವಿ. ರಮಣ ರೆಡ್ಡಿ ಕುಮಾರಸ್ವಾಮಿಯವರಿಗೆ ಸಾಥ್ ನೀಡಿದರು.
ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗುವ ಸಲುವಾಗಿ ಕುಮಾರಸ್ವಾಮಿಯವರು ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನೂ ಭೇಟಿಯಾಗಿರುವ ಅವರು, ಎರಡನೇಯ ಬಾರಿ ಪ್ರಧಾನಿಯಾಗಿರುವುದಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.