ನವದೆಹಲಿ: ತಮ್ಮ ಸರಳತೆಯ ಮೂಲಕವೇ ದೇಶದಾದ್ಯಂತ ಪ್ರಸಿದ್ಧಿಯನ್ನು ಪಡೆದುಕೊಂಡ ಒರಿಸ್ಸಾ ಬಾಲಸೋರ್ ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಚಂದ್ರ ಸಾರಂಗಿ ಮತ್ತು ದೆಹಲಿ ಸಂಸದ ಡಾ. ಹರ್ಷವರ್ಧನ್ ಅವರು ಸಂಸ್ಕೃತ ಭಾಷೆಯಲ್ಲಿ ಪ್ರಮಾಣವಚನವನ್ನು ಲೋಕಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
2019ರ ಲೋಕಸಬಾ ಚುನಾವಣೆಯಲ್ಲಿ ಆರಿಸಿ ಬಂದ ಎಲ್ಲಾ ಪ್ರತಿನಿಧಿಗಳು 17ನೇ ಲೋಕಸಭಾದ ಸದಸ್ಯರಾಗಿ ಇಂದು ಮತ್ತು ನಾಳೆ ಪ್ರಮಾಣವಚನವನ್ನು ಸ್ವೀಕಾರ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಲವಾರು ಮಂಡಿ ಹಂಗಾಮಿ ಸ್ಪೀಕರ್ ವಿರೇಂದ್ರ ಕುಮಾರ್ ಅವರಿಂದ ಪ್ರಮಾಣವಚನ ಸ್ವೀಕರಿಸಿದರು.
ಸಾರಂಗಿಯವರು ಪಶುಸಂಗೋಪಣೆ, ಮೀನುಗಾರಿಕೆ, ಡೈರಿ ಸಚಿವಾಲಯ ಮತ್ತು ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆ ಸಚಿವಾಲಯಗಳ ರಾಜ್ಯ ಖಾತೆ ಸಚಿವರಾಗಿದ್ದಾರೆ. ಡಾ. ಹರ್ಷವರ್ಧನ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿದ್ದಾರೆ. ಇವರಿಬ್ಬರಿಗೂ ಸಂಸ್ಕೃತದಲ್ಲಿ ಅಪಾರ ಜ್ಞಾನವಿದ್ದು, ಅದೇ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಜಮ್ಮು ಕಾಶ್ಮೀರದ ಉಧಮ್ಪುರ್ ಲೋಕಸಭಾ ಕ್ಷೇತ್ರದಿಂದ ಆರಿಸಿ ಬಂದಿರುವ ಜಿತೇಂದ್ರ ಸಿಂಗ್ ಅವರು ತಮ್ಮ ಮಾತೃಭಾಷೆ ದೋಗ್ರಿಯಲ್ಲಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಈಶಾನ್ಯ ಭಾಗ ಅಭಿವೃದ್ಧಿ ಸಚಿವಾಲಯದ ರಾಜ್ಯ ಖಾತೆ ಸಚಿವರಾಗಿದ್ದಾರೆ.
ಇನ್ನು ಕರ್ನಾಟಕದವರಾದ, ಡಿವಿ ಸದಾನಂದ ಗೌಡ ಮತ್ತು ಪ್ರಹ್ಲಾದ್ ಜೋಶೀ ಅವರು ಕನ್ನಡದಲ್ಲಿ ಪ್ರಮಾಣವಚನವನ್ನು ಸ್ವೀಕರಿಸುವ ಮೂಲಕ ಕನ್ನಡದ ಹಿರಿಮೆಯನ್ನು ಎತ್ತಿ ಹಿಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.