ಶ್ರೀನಗರ: ಭಾರತೀಯ ಸೇನೆಗೆ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಮಹತ್ವದ ವಿಜಯ ಸಿಕ್ಕಿದೆ. ಪುಲ್ವಾಮದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ ಆರೋಪಿಗಳಲ್ಲಿ ಒಬ್ಬನಾದ ಜೈಶೇ ಇ ಮೊಹಮ್ಮದ್ ಕಮಾಂಡರ್ ಸಜ್ಜದ್ ಭಟ್ ಹತ್ಯೆಯಾಗಿದ್ದಾನೆ. ಈತನ ವಾಹನವನ್ನು ಯೋಧರ ಮೇಲಿನ ದಾಳಿಗೆ ಬಳಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಮಹ್ರಮ್ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಈತ ಯೋಧರ ಗುಂಡಿಗೆ ಬಲಿಯಾಗಿದ್ದಾನೆ. ಈತನ ಹತ್ಯೆಯ ಮೂಲಕ ಪುಲ್ವಾಮ ದಾಳಿಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳ ಸಂಹಾರವಾಯಿತು ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಬೆಳಿಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಮೃತರಾಗಿದ್ದಾರೆ. ಅದರಲ್ಲಿ ಒರ್ವ ಸಜ್ಜದ್ ಭಟ್ ಆದರೆ ಮತ್ತೊಬ್ಬನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಪುಲ್ವಾಮ ದಾಳಿಯ ವೇಳೆ ಜೈಶೇ ಉಗ್ರನೊಬ್ಬ ಸೈನಿಕರು ತೆರಳುತ್ತಿದ್ದ ವಾಹನಗಳ ಮೇಲೆ ಬಾಂಬ್ ಅಳವಡಿತ ಕಾರನ್ನು ಗುದ್ದಿಸಿ ದೊಡ್ಡ ಸ್ಪೋಟವನ್ನು ನಡೆಸಿದ್ದ, ಇದರಲ್ಲಿ 40 ಯೋಧರು ಹುತಾತ್ಮರಾಗಿದ್ದರು.
ಫೆ.14ರಂದು ಪುಲ್ವಾಮದಲ್ಲಿ ನಡೆದ ದಾಳಿ ಇಡೀ ದೇಶ ಮತ್ತು ವಿಶ್ವವನ್ನೇ ಆಘಾತಕ್ಕೀಡು ಮಾಡಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಭಾರತ ಪಾಕಿಸ್ಥಾನದ ನೆಲಕ್ಕೆ ನುಗ್ಗಿ ಭಯೋತ್ಪಾದನಾ ಶಿಬಿರಗಳ ಮೇಲೆ ವೈಮಾನಿಕ ದಾಳಿಯನ್ನು ನಡೆಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.