ನವದೆಹಲಿ: ಪೆಟ್ರೋಲ್ ಬಂಕ್ ಮಾತ್ರವಲ್ಲದೇ, ಗ್ರಾಹಕರು ಸೂಪರ್ ಮಾರ್ಕೆಟ್ಗಳಲ್ಲೂ ಪೆಟ್ರೋಲ್, ಡಿಸೇಲ್ಗಳನ್ನು ಖರೀದಿ ಮಾಡುವ ಕಾಲ ಶೀಘ್ರದಲ್ಲೇ ಬರಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಯೋಜನೆಯೊಂದನ್ನು ರೂಪಿಸಲು ಮುಂದಾಗಿದೆ.
ಪ್ರಸ್ತುತ ಇರುವ ನಿಯಮಗಳನ್ನು ಸಡಿಲಗೊಳಿಸಿ, ಆ ಮೂಲಕ ಸೂಪರ್ ಮಾರ್ಕೆಟ್ಗಳಲ್ಲಿ ಪೆಟ್ರೋಲ್ ಮತ್ತು ಡಿಸೇಲ್ಗಳು ಮಾರಾಟವಾಗುವಂತೆ ಮಾಡುವ ಪ್ರಸ್ತಾಪಕ್ಕೆ ಕೇಂದ್ರ ಸಂಪುಟದ ಅನುಮೋದನೆಯನ್ನು ಪಡೆಯಲು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಪ್ರಯತ್ನಗಳನ್ನು ನಡೆಸುತ್ತಿದೆ.
ಮೂಲಗಳ ಪ್ರಕಾರ, ಪೆಟ್ರೋಲ್ ಬಂಕ್ ಮಾತ್ರವಲ್ಲದೇ ಸೂಪರ್ ಮಾರ್ಕೆಟ್ಗಳಲ್ಲೂ ಪೆಟ್ರೋಲ್ ಮತ್ತು ಡಿಸೇಲ್ ಲಭ್ಯವಾಗುವಂತೆ ಮಾಡುವ ಪ್ರಸ್ತಾಪವನ್ನು ಸಚಿವಾಲಯವು ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟದ ಮುಂದಿಡಲಿದೆ.
ಚಿಲ್ಲರೆ ಇಂಧನ ವಲಯಕ್ಕೆ ಖಾಸಗಿ ಕಂಪನಿಗಳಿಗೆ ಪ್ರವೇಶಿಸುವ ಕನಿಷ್ಠ ಅಗತ್ಯಗಳನ್ನು ಕೇಂದ್ರ ಸರ್ಕಾರ ತಗ್ಗಿಸಬಹುದು ಎಂದು ಮೂಲಗಳು ತಿಳಿಸಿವೆ. ಈ ಅಗತ್ಯಗಳು ದೇಶೀಯ ಮಾರುಕಟ್ಟೆಯಲ್ಲಿ ಸುಮಾರು 2,000 ಕೋಟಿ ರೂ.ಗಳ ಮೂಲಸೌಕರ್ಯ ಹೂಡಿಕೆಯಲ್ಲಿ ವಿನಾಯಿತಿಯನ್ನು ಪಡೆಯುವುದು, 30 ಲಕ್ಷ ಟನ್ ಕಚ್ಚಾ ತೈಲಕ್ಕೆ ಬ್ಯಾಂಕ್ ಗ್ಯಾರಂಟಿ ನೀಡುವುದು ಕೂಡ ಸೇರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.