ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸರ್ಕಾರದ 100 ದಿನಗಳ ಅಜೆಂಡಾವನ್ನು ಅಂತಿಮಗೊಳಿಸುವ ಸಲುವಾಗಿ ಮಂಗಳವಾರ, ಹಣಕಾಸು ಸಚಿವಾಲಯ ಮತ್ತು ಇತರ ಪ್ರಮುಖ ಸಚಿವಾಲಯಗಳ ಪ್ರಮುಖ ಕಾರ್ಯದರ್ಶಿಗಳ ಸಭೆಯನ್ನು ನಡೆಸಿದರು. ಆರ್ಥಿಕತೆಯನ್ನು ಪುನಃಶ್ಚೇತನಗೊಳಿಸುವುದು, ಉದ್ಯೋಗ ಸೃಷ್ಟಿ ಕಾರ್ಯಕ್ರಮ ಇತ್ಯಾದಿಗಳ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆದಿದೆ.
ಈ ಮಹತ್ವದ ಸಭೆ ಪ್ರಧಾನಿಯವರ ನಿವಾಸದಲ್ಲಿ ಜರುಗಿದ್ದು, ಹಣಕಾಸು ಸಚಿವಾಲಯದ ಎಲ್ಲಾ ಐದು ಕಾರ್ಯದರ್ಶಿಗಳು, ನೀತಿ ಆಯೋಗದ ಉನ್ನತ ಅಧಿಕಾರಿಗಳು, ಇತರ ಸಚಿವಾಲಯದ ಉನ್ನತ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದರು.
ಐದು ವರ್ಷಗಳ ಅವಧಿಯಲ್ಲಿ $5 ಟ್ರಿಲಿಯನ್ ಆರ್ಥಿಕತೆಯಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಚರ್ಚೆಯನ್ನು ಈ ಸಭೆಯಲ್ಲಿ ನಡೆಸಲಾಗಿದೆ. ಮಾತ್ರವಲ್ಲದೇ, ರೈತರ ಆದಾಯ ದ್ವಿಗುಣಗೊಳಿಸುವಿಕೆ, ಎಲ್ಲರಿಗೂ ಪೈಪ್ ವಾಟರ್ ಮುಂತಾದ ಪ್ರಧಾನಿಯವರ ಮಹತ್ವಾಕಾಂಕ್ಷೆಯ ಗುರಿಗಳ ಬಗ್ಗೆ ಚರ್ಚೆಯನ್ನು ನಡೆಸಲಾಗಿದೆ.
ಭಾರತದಲ್ಲಿ ಸುಲಲಿತ ಉದ್ಯಮ ನಡೆಸಲು ಮತ್ತು ಆರ್ಥಿಕತೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಪ್ರತಿ ಇಲಾಖೆಗಳಲ್ಲಿ ಪ್ರಮುಖ ಸುಧಾರಣೆಗಳನ್ನು ತರುವ ಬಗ್ಗೆಯೂ ಮೋದಿಯವರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.