ನವದೆಹಲಿ: ಉದ್ಯೋಗಾವಕಾಶಗಳನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರವು ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇದ್ದ ಶಿಕ್ಷಣದ ಮಿತಿಯನ್ನು ಸಂಪೂರ್ಣ ತೆಗೆದು ಹಾಕಲಿದೆ. ಇನ್ನು ಮುಂದೆ ಶಾಲೆಯ ಮೆಟ್ಟಿಲು ಹತ್ತದವರು ಕೂಡ ಡ್ರೈವಿಂಗ್ ಲೈಸೆನ್ಸ್ ಅನ್ನು ಪಡೆಯಬಹುದಾಗಿದೆ.
ಪ್ರಸ್ತುತ ಕೇಂದ್ರ ಮೋಟಾರು ವಾಹನ ಕಾಯ್ದೆ 1989ರ ಪ್ರಕಾರ, ಡ್ರೈವಿಂಗ್ ಲೈಸೆನ್ಸ್ ಪಡೆದುಕೊಳ್ಳಲು ಬಯಸುವವರು ಕನಿಷ್ಠ 8ನೇ ತರಗತಿಯನ್ನು ತೇರ್ಗಡೆಯಾಗಿರುವುದು ಕಡ್ಡಾಯ.
ಆದರೀಗ ಕೇಂದ್ರ ಸರ್ಕಾರ ಶಿಕ್ಷಣದ ಮಿತಿಯನ್ನು ಸಂಪೂರ್ಣ ತೆಗೆದು ಹಾಕಲು ಮುಂದಾಗಿದೆ. ಕೌಶಲ್ಯ ಭರಿತ ಶಿಕ್ಷಣವಿಲ್ಲದ ಜನರಿಗೆ ಉದ್ಯೋಗ ಪಡೆಯಲು ಸಹಾಯಕವಾಗುವ ನಿಟ್ಟಿನಲ್ಲಿ ಈ ಕ್ರಮವನ್ನು ತೆಗೆದುಕೊಳ್ಳುತ್ತಿದೆ.
“ಆರ್ಥಿಕವಾಗಿ ಹಿಂದುಳಿದ ವರ್ಗಗಳ ಕೌಶಲ್ಯಭರಿತ ಜನರಿಗೆ ಸಹಾಯಕವಾಗುವ ಸಲುವಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಸಾರಿಗೆ ವಾಹನಗಳಿಗೆ ಪರವಾನಗಿ ಪಡೆಯಲು ಇದ್ದ ಶಿಕ್ಷಣ ಮಿತಿಯನ್ನು ತೆಗೆದು ಹಾಕಲು ನಿರ್ಧರಿಸಿದೆ” ಎಂದು ರಸ್ತೆ ಸಾರಿಗೆ ಸಚಿವಾಲಯದ ಅಧಿಕೃತ ಪ್ರಕಟನೆ ತಿಳಿಸಿದೆ.
ಔಪಚಾರಿಕ ಶಿಕ್ಷಣವನ್ನು ಪಡೆಯದ, ಆದರೆ ಕೌಶಲ್ಯ ಮತ್ತು ಇತರ ಜ್ಞಾನವನ್ನು ಸಂಪಾದಿಸಿ ದೇಶದ ಗ್ರಾಮೀಣ ಭಾಗದ ನಿರುದ್ಯೋಗಿ ಜನರಿಗೆ ಈ ನಿರ್ಧಾರದಿಂದ ಸಾಕಷ್ಟು ಪ್ರಯೋಜನವಾಗಲಿದೆ.
“ವಾಹನವನ್ನು ಓಡಿಸಲು ಶಿಕ್ಷಣಕ್ಕಿಂತ ಹೆಚ್ಚಾಗಿ ಕೌಶಲ್ಯದ ಅಗತ್ಯವಿದೆ. ಅರ್ಹ ನಿರುದ್ಯೋಗಿ ಯುವಕರಿಗೆ ಶಿಕ್ಷಣದ ಅರ್ಹತೆ ತೊಡಕಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.