ಮುಂಬಯಿ: ಮರಾಠ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣದಲ್ಲಿ ಮೀಸಲಾತಿಯನ್ನು ಕಲ್ಪಿಸುವ ಸಲುವಾಗಿ ಮಹಾರಾಷ್ಟ್ರ ವಿಧಾನಸಭೆಯು ಗುರುವಾರ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಕಾಯ್ದೆ 2018ಗೆ ತಿದ್ದುಪಡಿಯನ್ನು ಅಂಗೀಕರಿಸಿದೆ.
ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಯಲ್ಲಿ ಮರಾಠ ವಿದ್ಯಾರ್ಥಿಗಳಿಗೆ ಖೋಟಾವನ್ನು ನೀಡುವ ಸಲುವಾಗಿ ಈ ತಿದ್ದುಪಡಿ ಮಸೂದೆಯನ್ನು ಅಂಗೀಕಾರಗೊಳಿಸಲಾಗಿದೆ.
ಈ ಹಿಂದೆ ಸರ್ಕಾರ ಸುಗ್ರೀವಾಜ್ಞೆಯನ್ನು ಪ್ರಕಟಿಸಿತ್ತು. ಕಳೆದ ವರ್ಷ ನವೆಂಬರ್ 29 ರಂದು ಮಹಾರಾಷ್ಟ್ರ ಶಾಸಕಾಂಗವು ಮರಾಠರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 16 ರಷ್ಟು ಮೀಸಲಾತಿಯನ್ನು ಪ್ರಸ್ತಾಪಿಸಿತ್ತು ಮತ್ತು ಮರಾಠಿಗರನ್ನು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗ (ಎಸ್ಬಿಸಿ) ಎಂದು ಸರ್ಕಾರ ಘೋಷಿಸಿತು.
ನವೆಂಬರ್ 2 ರಿಂದ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶ ಪ್ರಾರಂಭವಾದಾಗ, ಮುಕ್ತ ವರ್ಗದ ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್ಗೆ ಮೀಸಲಾತಿ ವಿರುದ್ಧ ಮನವಿ ಮಾಡಿದ್ದರು ಮತ್ತು ಮೀಸಲಾತಿಯನ್ನು ರದ್ದುಪಡಿಸಲಾಯಿತು.
ಕಳೆದ ತಿಂಗಳು, ಬಾಂಬೆ ಹೈಕೋರ್ಟ್ನ ನಾಗ್ಪುರ ನ್ಯಾಯಪೀಠವು ಈ ವರ್ಷ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗ ವರ್ಗದ ಅಡಿಯಲ್ಲಿ ಮರಾಠಾ ಸಮುದಾಯಕ್ಕೆ ಶೇ 16 ರಷ್ಟು ಮೀಸಲಾತಿ ಅನ್ವಯವಾಗುವುದಿಲ್ಲ ಎಂದು ಹೇಳಿತ್ತು.
ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳಲ್ಲಿ ಮರಾಠಿಗರಿಗೆ ಮೀಸಲಾತಿಯನ್ನು ನಡುವ ಸಲುವಾಗಿ ಸುಗ್ರೀವಾಜ್ಞೆ ಹೊರಡಿಸಲು ಕಳೆದ ತಿಂಗಳು ಮಹಾ ಸರ್ಕಾರ ಚುನಾವಣಾ ಆಯೋಗದಿಂದ ಅನುಮತಿ ಪಡೆದಿತ್ತು. ಈಗಾಗಲೇ ಮೀಸಲಾತಿಯಡಿ ನೀಡಲಾಗಿದ್ದ ಪ್ರವೇಶವನ್ನು ಸ್ಥಿರವಾಗಿಡುವ ಸಲುವಾಗಿ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.