ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಶುಕ್ರವಾರ ನಿರೀಕ್ಷೆಯಂತೆ ತ್ರಿವಳಿ ತಲಾಖ್ ಮಸೂದೆಯನ್ನು ಲೋಕಸಭಾದಲ್ಲಿ ಮಂಡನೆಗೊಳಿಸಿದೆ. ಈ ಮೂಲಕ ಮೋದಿಯವರ ಎರಡನೇಯ ಅವಧಿಯ ಸರ್ಕಾರದಲ್ಲಿ ಮಂಡನೆಗೊಂಡ ಮೊದಲ ಮಸೂದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಮುಸ್ಲಿಂ ಮಹಿಳೆಯರ ಹಕ್ಕನ್ನು ಸಂರಕ್ಷಣೆ ಮಾಡುವ ಸಲುವಾಗಿ ಈ ಮಸೂದೆಯನ್ನು ಮಂಡನೆಗೊಳಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ, ಆದರೆ ಪ್ರತಿಪಕ್ಷಗಳು ಮಾತ್ರ ಮಸೂದೆ ಮಂಡನೆಯ ವೇಳೆ ದೊಡ್ಡ ಮಟ್ಟದಲ್ಲಿ ಗದ್ದಲವನ್ನೇ ಎಬ್ಬಿಸಿದವು.
ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಈ ಮಸೂದೆಯನ್ನು ಮಂಡನೆಗೊಳಿಸಿದ್ದು, ಈ ವೇಳೆ ದೇಶದಲ್ಲಿ ತ್ರಿವಳಿ ತಲಾಖಿಗೆ ಸಂಬಂಧಿಸಿದ 543 ಪ್ರಕರಣಗಳು ವರದಿಯಾಗಿವೆ ಎಂದಿದ್ದಾರೆ. ಸುಪ್ರೀಂಕೋರ್ಟ್ ನಿಷೇಧದ ಬಳಿಕವೂ ದೇಶದಲ್ಲಿ 200 ತ್ರಿವಳಿ ತಲಾಖ್ ಪ್ರಕರಣಗಳು ದಾಖಲಾಗಿವೆ ಎಂದಿದ್ದಾರೆ.
ಜನರು ತಮ್ಮ ಸಮಸ್ಯೆಗಳ ವಿರುದ್ಧ ಕಾನೂನು ರಚನೆ ಮಾಡಲು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಕಾನೂನು ರಚಿಸುವುದು ನಮ್ಮ ಕರ್ತವ್ಯ. ತ್ರಿವಳಿ ತಲಾಖ್ ಕಾನೂನು ಮುಸ್ಲಿಂ ಮಹಿಳಾ ಸಂತ್ರಸ್ಥರಿಗೆ ನ್ಯಾಯ ದೊರಕಿಸಿಕೊಡುತ್ತದೆ ಎಂದು ಅವರು ಹೇಳಿದ್ದಾರೆ.
ಆದರೆ ಪ್ರತಿಪಕ್ಷಗಳು ತ್ರಿವಳಿ ತಲಾಖ್ ಮಸೂದೆಯ ಮೂಲಕ ಎನ್ಡಿಎ ಸರ್ಕಾರ ಜನತೆಗೆ ಅನ್ಯಾಯ ಮಾಡುತ್ತಿದೆ, ತಲಾಖ್ ನೀಡಿದ ಪತಿಗೆ ಜೈಲು ಶಿಕ್ಷೆ ವಿಧಿಸುವುದು ಅನ್ಯಾಯ, ಈ ಮಸೂದೆಯನ್ನು ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿವೆ. ಆದರೆ ಈ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.